ಸೋಮವಾರಪೇಟೆ, ಆ.೩೦: ಸಮೀಪದ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಜೆಗುಂಡಿ ಗ್ರಾಮದಲ್ಲಿ ಶಾಸಕರ ನಿಧಿ ಸೇರಿದಂತೆ ಇತರ ಯೋಜನೆಗಳ ಮೂಲಕ ಕೈಗೊಂಡ ರೂ.೫೫ ಲಕ್ಷ ವೆಚ್ಚದ ನೂತನ ಕಾಂಕೀಟ್ ರಸ್ತೆಗಳನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಉದ್ಘಾಟಿಸಿದರು.

ಬೆಟ್ಟದಂತಿರುವ ಪ್ರದೇಶದಲ್ಲಿಯೇ ಬಜೆಗುಂಡಿ ಗ್ರಾಮವಿದ್ದು, ಗ್ರಾಮದ ಒಳಭಾಗದ ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿದ್ದವು. ಡಾಂಬರು ರಸ್ತೆ ನಿರ್ಮಿಸಿದರೆ ಬಾಳಿಕೆ ಬರುವುದಿಲ್ಲ ಎಂಬ ಕಾರಣಕ್ಕೆ ಇಡೀ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿದೆ. ಗ್ರಾಮದ ಎಲ್ಲಾ ಒಳರಸ್ತೆಗಳೂ ಕಾಂಕ್ರಿಟೀಕರಣಗೊAಡಿದ್ದು, ಶೇ. ೮೫ರಷ್ಟು ರಸ್ತೆ ಸಮಸ್ಯೆ ಬಗೆಹರಿದಿದೆ ಎಂದು ಶಾಸಕ ಅಪ್ಪಚ್ಚುರಂಜನ್ ಹೇಳಿದರು.

ಈ ಸಂದರ್ಭ ಬೇಳೂರು ಗ್ರಾ.ಪಂ. ಅಧ್ಯಕ್ಷ ಬಿ.ಎಂ. ಪ್ರಶಾಂತ್, ಉಪಾಧ್ಯಕ್ಷೆ ಸುಜಾತ, ಸದಸ್ಯರುಗಳು, ಜಿ.ಪಂ. ಮಾಜೀ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ. ಮಾಜೀ ಉಪಾಧ್ಯಕ್ಷ ಅಭಿಮನ್ಯುಕುಮಾರ್, ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಶಾಂತ್ ಗಣೇಶ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.