ಮಡಿಕೇರಿ, ಆ. ೩೦: ಸರ್ಕಾರದ ಆದೇಶದಂತೆ ಶ್ರೀ ಕೃಷ್ಣ ಜನ್ಮಾಷ್ಟಮಿ ಯನ್ನು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಸಹಾಯಕ ನಿರ್ದೇಶಕಿ ಕೆ.ಟಿ. ದರ್ಶನ ಅವರು ಉದ್ಘಾಟಿಸಿ ಪುಷ್ಪಾರ್ಚನೆ ನೆರವೇರಿಸಿ ದರು. ಕಾರ್ಯಕ್ರಮದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಿಷ್ಣುಮೂರ್ತಿ ಹಾಗೂ ಇತರರು ಹಾಜರಿದ್ದರು.