ಮಡಿಕೇರಿ, ಆ.೩೦: ಕರ್ನಾಟಕ ಸಹಸ್ರ ಕ್ರೀಡಾ ಪ್ರತಿಭಾ ಯೋಜನೆಯಡಿಯಲ್ಲಿ ಯುವ ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಗುರುತಿಸಿ ರಾಷ್ಟಿçÃಯ ಮತ್ತು ಅಂತರರಾಷ್ಟಿçÃಯ ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಲು ಬೆಂಬಲ ನೀಡುವ ಉದ್ದೇಶದಿಂದ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಿಂದಿನ ೩ ವರ್ಷಗಳಲ್ಲಿ (೦೧-೪-೨೦೧೮ ರಿಂದ ೩೧-೦೩-೨೦೨೧ ರ ಅವಧಿಯಲ್ಲಿ) ಕರ್ನಾಟಕವನ್ನು ಪ್ರತಿನಿಧಿಸಿ ಗಣನೀಯ ಸಾಧನೆ ದಾಖಲಿಸಿದ ೨೩ ವರ್ಷದೊಳಗಿನ ಯುವ ಕ್ರೀಡಾಪಟುಗಳು ಆನ್‌ಲೈನ್ ಲಿಂಕ್ hಣಣಠಿs://ಜಥಿes-ಞಡಿeeಜಚಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, ೦೬ ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಮಡಿಕೇರಿ ದೂ.ಸಂ.೦೮೨೭೨-೨೨೮೯೮೫ ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ ಅವರು ತಿಳಿಸಿದ್ದಾರೆ.