ಮಡಿಕೇರಿ, ಆ.೩೦: ನವದೆಹಲಿಯ ಕರ್ನಾಟಕ ಭವನದ ವಿವಿಧ ವೃಂದದ ಖಾಲಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಕಾಯುವಿಕೆ ಎರಡನೇ ಪಟ್ಟಿ ಪ್ರಕಟಿಸಲಾಗಿದೆ.

ನವದೆಹಲಿಯ ಕರ್ನಾಟಕ ಭವನದಲ್ಲಿ ವಿವಿಧ ವೃಂದಗಳಲ್ಲಿ ಖಾಲಿಯಿರುವ ೩೨ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವುದಕ್ಕೆ ೨೦೨೧ ರ ಫೆಬ್ರವರಿ, ೨೦ ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಅಧಿಸೂಚನೆಯನುಸಾರ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳ ಹೆಚ್ಚುವರಿ ಆಯ್ಕೆಪಟ್ಟಿಯಂತೆ ೨೦೨೧ ರ ಆಗಸ್ಟ್, ೨೪ ರಂದು ಬೆಂಗಳೂರಿನ ಕುಮಾರ ಕೃಪ ಅತಿಥಿ ಗೃಹದಲ್ಲಿ ದಾಖಲೆ ಪರಿಶೀಲನೆ ಮತ್ತು ಅನ್ವಯಿಸುವ ಹುದ್ದೆಗಳಿಗೆ ಪ್ರಾವೀಣ್ಯತೆ ಪರೀಕ್ಷೆ ನಡೆಸಲಾಗಿದೆ.

ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ, ಕಾಯುವಿಕೆ ಪಟ್ಟಿ ಹಾಗೂ ಹೆಚ್ಚಿನ ಮಾಹಿತಿಯನ್ನು ೨೦೨೧ ರ ಆಗಸ್ಟ್, ೨೭ ರಂದು ಪ್ರಕಟಿಸಲಾಗಿದ್ದು, ವಿವರದ ಮಾಹಿತಿಗೆ ತಿತಿತಿ.ಞಚಿಡಿಟಿಚಿಣಚಿಞಚಿbhಚಿvಚಿಟಿ.ಞಚಿಡಿಟಿಚಿಣಚಿಞಚಿ.gov.iಟಿ ನ್ನು ವೀಕ್ಷಿಸಬಹುದು. ಬಾಧಿತರಾಗಬಹುದಾದ ಅಭ್ಯರ್ಥಿಗಳು ತಮ್ಮ ಆಕ್ಷೇಪಣೆಯನ್ನು ಸೆಪ್ಟೆಂಬರ್, ೦೪ ರ ಸಂಜೆ ೫-೩೦ ರೊಳಗೆ ಲಿಖಿತವಾಗಿ ಅಥವಾ ಇಮೇಲ್ ಮೂಲಕ ಸಲ್ಲಿಸಬಹುದಾಗಿದೆ ಎಂದು ನೇರ ನೇಮಕಾತಿ ಆಯ್ಕೆ ಸಮಿತಿ ಅಧ್ಯಕ್ಷರು ಹಾಗೂ ನವದೆಹಲಿಯ ಕರ್ನಾಟಕ ಭವನದ ಉಪ ನಿವಾಸಿ ಆಯುಕ್ತರಾದ ಎಚ್.ಪ್ರಸನ್ನ ಅವರು ತಿಳಿಸಿದ್ದಾರೆ.