ಮಡಿಕೇರಿ, ಆ. ೩೧: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೊಡಗು ಜಿಲ್ಲಾ ಕಚೇರಿಯಿಂದ ೨೦೨೧-೨೨ ನೇ ಸಾಲಿನ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ಯೋಜನೆ, ನೇರಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ (ನೋಂದಾಯಿತಿ ಮಹಿಳಾ ಸ್ವ-ಸಹಾಯ ಸಂಘ) ಭೂ ಒಡೆತನ ಯೋಜನೆ ಹಾಗೂ ಸಮಗ್ರ ಗಂಗಾ ಕಲ್ಯಾಣ ಯೋಜನೆಗಳಿಂದ ಸೌಲಭ್ಯ ಪಡೆಯಲು ಪರಿಶಿಷ್ಟ ಪಂಗಡದ ಫಲಾಪೇಕ್ಷಿಗಳಿಂದ ಆನ್‌ಲೈನ್‌ನ ವೆಬ್‌ಸೈಟ್ hಣಣಠಿ://ಞmvsಣಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಅರ್ಜಿ ಸಲ್ಲಿಸಲು ತಾ. ೩೧ ರವರೆಗೆ ಅವಧಿ ವಿಸ್ತರಿಸಲಾಗಿದೆ.

ಅರಣ್ಯ ಆಧಾರಿತ ಆದಿವಾಸಿ ಮತ್ತು ಅಲೆಮಾರಿ, ಅರೆಅಲೆಮಾರಿ, ಸೂಕ್ಷö್ಮ ಮತ್ತು ಅತೀ ಸೂಕ್ಷö್ಮ ಸಮುದಾಯದವರು ಬಹುತೇಕವಾಗಿ ಗುಡ್ಡಗಾಡು ಪ್ರದೇಶಗಳಲ್ಲಿ ಹಾಗೂ ನಗರ ಪ್ರದೇಶದ ಹೊರಗೆ ವಾಸ ಮಾಡುತ್ತಿರುವುದರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕಷ್ಟಸಾಧ್ಯವಾಗುತ್ತಿರುವುದನ್ನು ಪರಿಗಣಿಸಿ, ಈ ಸಮುದಾಯದ ಫಲಾಪೇಕ್ಷಿಗಳಿಂದ ಆಪ್‌ಲೈನ್ ಮೂಲಕ ಸಹ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೯ ರವರೆಗೆ ನಿಗದಿಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ರೇಸ್‌ಕೋರ್ಸ್ ರಸ್ತೆ, ಹೊಸ ಬಡಾವಣೆ, ಮಡಿಕೇರಿ-೫೭೧೨೦೧. ದೂ. ೦೮೨೭೨-೨೨೮೮೫೭ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.