ಸಿದ್ದಾಪುರ, ಆ. ೩೧: ನೆಲ್ಲಿಹುದಿಕೇರಿಯ ನದಿ ತೀರದ ಸಂತ್ರಸ್ತರಿಗೆ ಅರೆಕಾಡು ಗ್ರಾಮದಲ್ಲಿ ಗುರುತಿಸಿದ ನಿವೇಶನಗಳ ಬಳಿ ಕಿರು ಸೇತುವೆ ನಿರ್ಮಾಣ ಮಾಡಬೇಕೆಂದು ಒತ್ತಾಯಿಸಿ ನೆಲ್ಲಿಹುದಿಕೇರಿಯ ಸಂತ್ರಸ್ತರ ಹೋರಾಟ ಸಮಿತಿಯ ವತಿಯಿಂದ ಅರೆಕಾಡುವಿನ ನಿವೇಶನ ಗುರುತಿಸಿದ ಜಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಈ ಸಂದರ್ಭ ಮಾತನಾಡಿದ ಸಮಿತಿಯ ಅಧ್ಯಕ್ಷ ಪಿ.ಆರ್. ಭರತ್ ೨೦೧೮-೧೯ನೇ ಸಾಲಿನಲ್ಲಿ ಸುರಿದ ಮಹಾಮಳೆಗೆ ಕಾವೇರಿ ನದಿಯಲ್ಲಿ ಪ್ರವಾಹಕ್ಕೆ ಸಿಲುಕಿ ನೆಲ್ಲಿಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ ಬೆಟ್ಟದಕಾಡು ಹಾಗೂ ಕುಂಬಾರಗುAಡಿ ಭಾಗದಲ್ಲಿ ನೂರಾರು ಮನೆಗಳು ನೆಲಸಮ ಗೊಂಡಿತ್ತು. ಮನೆ ಕಳೆದುಕೊಂಡ ಸಂತ್ರಸ್ತ ಕುಟುಂಬಗಳು ಪುನರ್ವಸತಿ ಕಲ್ಪಿಸಿಕೊಡುವಂತೆ ಸರ್ಕಾರ ಹಾಗೂ ಜಿಲ್ಲಾಡಳಿತವನ್ನು ಒತ್ತಾಯಿಸಿ ಪ್ರತಿಭಟನೆ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ಅರೆಕಾಡು ಗ್ರಾಮದಲ್ಲಿ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಜಾಗ ಗುರುತಿಸಲಾಗಿದ್ದು, ಜಿಲ್ಲಾಡಳಿತದ ವತಿಯಿಂದ ನಿವೇಶನಗಳನ್ನು ಹಂಚಿಕೆ ಮಾಡಲಾಗಿತ್ತು. ಆದರೆ ನಿವೇಶನಗಳ ಬಳಿ ಗುಂಡಿ ಇರುವ ಕಾರಣ ಅಲ್ಲಿ ಕಿರುಸೇತುವೆ ನಿರ್ಮಾಣ ಮಾಡಲು ಈ ಹಿಂದೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದರೂ ಕೂಡ ಸಂಬAಧಪಟ್ಟ ಇಲಾಖಾಧಿಕಾರಿಗಳು ನಿರ್ಲಕ್ಷö್ಯ ವಹಿಸಿದ್ದಾರೆ ಎಂದು ಭರತ್ ದೂರಿದರು. ಈ ಬಗ್ಗೆ ಜಿಲ್ಲಾಧಿಕಾರಗಳಿಗೆ ಮನವಿ ಪತ್ರ ನೀಡಲಾಗುವುದೆಂದು ತಿಳಿಸಿದರು. ಪ್ರತಿಭಟನೆಯಲ್ಲಿ ಗ್ರಾ.ಪಂ. ಅಧ್ಯಕ್ಷ ಸಾಬೂ ವರ್ಗೀಸ್, ಸಂತ್ರಸ್ತರಾದ ಪೂಕೂಂಜಿ, ಚಂದ್ರನ್, ಮಣಿ, ಶೈಲ, ಮುಸ್ತಫಾ ಇನ್ನಿತರರು ಹಾಜರಿದ್ದರು.