ಚೆಟ್ಟಳ್ಳಿ, ಆ. ೩೧: ತಳ ಮಟ್ಟದಿಂದಲೇ ಫುಟ್ಬಾಲ್ ಕ್ರೀಡೆ ಅಭಿವೃದ್ಧಿ ಹೊಂದಿದರೆ ಮಾತ್ರ ಫುಟ್ಬಾಲ್ ಬೆಳೆಯಲು ಸಾಧ್ಯ ಎಂದು ರಾಜ್ಯ ಫುಟ್ಬಾಲ್ ಸಂಸ್ಥೆಯ ಕಾರ್ಯದರ್ಶಿ ಸತ್ಯನಾರಾಯಣ ಅಭಿಪ್ರಾಯಪಟ್ಟರು.
ಅಮ್ಮತ್ತಿಯ ಪ್ರೌಢಶಾಲಾ ಮೈದಾನದಲ್ಲಿರುವ ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಕಚೇರಿಯಲ್ಲಿ ನಡೆದ ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್ ಮಹಾಸಭೆಗೆ ವೀಕ್ಷಕರಾಗಿ ಆಗಮಿಸಿ ಅವರು ಮಾತನಾಡಿದರು.
ರಾಜ್ಯ ಫುಟ್ಬಾಲ್ ಸಂಸ್ಥೆ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ, ಫುಟ್ಬಾಲ್ ಅಭಿವೃದ್ಧಿ ಬಗ್ಗೆ ಖುದ್ದಾಗಿ ಪರಿಶೀಲನೆ ನಡೆಸುತ್ತಿದೆ.
ಜಿಲ್ಲೆಯಲ್ಲಿ ಫುಟ್ಬಾಲ್ ಅಭಿವೃದ್ಧಿ ಹೊಂದಿದರೆ ಮಾತ್ರ ರಾಜ್ಯ, ರಾಷ್ಟ್ರ ಹಾಗೂ ಅಂರ‍್ರಾಷ್ಟಿçÃಯ ಮಟ್ಟದಲ್ಲಿ ಫುಟ್ಬಾಲ್ ಬೆಳವಣಿಗೆಯಾಗಲು ಸಾಧ್ಯ.
ರಾಜ್ಯ ಫುಟ್ಬಾಲ್ ಸಂಸ್ಥೆಯಿAದ, ಜಿಲ್ಲಾ ಫುಟ್ಬಾಲ್ ಸಂಸ್ಥೆಗಳಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದೇವೆ.
ಈಗಾಗಲೇ ರಾಜ್ಯ ಸಂಸ್ಥೆಯಲ್ಲಿ ನೋಂದಣಿಯಾದ ಎಲ್ಲಾ ತಂಡಗಳಿಗೆ ೨೦ ಟ್ರಾö್ಯಕ್ ಸೂಟ್ ಕೂಡ ನೀಡಲಾ ಗುತ್ತಿದೆ ಎಂದು ಮಾಹಿತಿ ನೀಡಿದರು.
ಕೊಡಗು ಜಿಲ್ಲೆಯ ಜನರಲ್ಲಿ ಕ್ರೀಡೆ ಎಂಬುದು ರಕ್ತಗತವಾಗಿ ಬಂದಿದೆ. ಇಲ್ಲಿನ ಜನರು ವಿಶೇಷವಾಗಿ ಕ್ರೀಡೆಗೆ ಹೆಚ್ಚಿನ ಆಸಕ್ತಿ ನೀಡುವವರು. ಜಿಲ್ಲೆಯಲ್ಲಿ ಯುವ ಫುಟ್ಬಾಲ್ ಪ್ರತಿಭೆಗಳಿಗೆ ಉತ್ತಮ ವೇದಿಕೆ ಒದಗಿಸುವ ಕೆಲಸಗಳು ಆಗಬೇಕಾಗಿದೆ.
ರಾಜ್ಯ ಸಂಸ್ಥೆಯಿAದ, ಜಿಲ್ಲೆ ಫುಟ್ಬಾಲ್ ಸಂಸ್ಥೆಗಳಲ್ಲಿ ನೋಂದಣಿ ಯಾದ ತಂಡಗಳಿಗೆ ಎರಡು ದಿನ ವಿಶೇಷ ತರಬೇತಿಯನ್ನು, ನುರಿತ ತರಬೇತುದಾರರಿಂದ ನೀಡುವ ಹೊಸ ಯೋಜನೆ ಸದ್ಯದಲ್ಲೇ ನಡೆಯಲಿದೆ ಎಂದರು.
ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಅಧ್ಯಕ್ಷ ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ ಅವರು, ಎಲ್ಲರೂ ಒಗ್ಗಟ್ಟನಿಂದ ಜಿಲ್ಲೆಯ ಫುಟ್ಬಾಲ್ ಬೆಳವಣಿಗೆಗೆ ಕೈ ಜೋಡಿಸಬೇಕಾಗಿದೆ.
ಜಿಲ್ಲಾ ಫುಟ್ಬಾಲ್ ಸಂಸ್ಥೆಯೊAದಿಗೆ ಕೈ ಜೋಡಿಸಿದ ಫಲವಾಗಿ ಉತ್ತಮ ವಾಗಿ ಸಂಸ್ಥೆಯನ್ನು ಕೊಂಡೊಯ್ಯಲು ಸಾಧ್ಯವಾಯಿತು. ಈಗಾಗಲೇ ಜಿಲ್ಲಾ ಫುಟ್ಬಾಲ್ ಸಂಸ್ಥೆಯಲ್ಲಿ ೨೦ ತಂಡಗಳು ನೋಂದಣಿಯಾಗಿವೆ. ಜಿಲ್ಲೆಯ ಎಲ್ಲಾ ಫುಟ್ಬಾಲ್ ಪ್ರೇಮಿಗಳು ನಮ್ಮೊಂದಿಗೆ ಕೈ ಜೋಡಿಸುತ್ತಿದ್ದಾರೆ.
ಜಿಲ್ಲಾ ಫುಟ್ಬಾಲ್ ಸಂಸ್ಥೆಯಲ್ಲಿ ನೋಂದಣಿಯಾದ ಯಾವ ಕ್ಲಬ್ ಕೂಡ ಅನಧಿಕೃತವಾಗಿ ಪಂದ್ಯಾವಳಿ ಗಳನ್ನು ಆಯೋಜನೆ ಮಾಡಬೇಡಿ ಎಂದು ಹೇಳಿದರು.
ನೂತನ ಅಧ್ಯಕ್ಷರ ಆಯ್ಕೆ
೭೦ ವರ್ಷ ಮೇಲ್ಪಟ್ಟವರು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಯಾವುದೇ ಹುದ್ದೆಗಳನ್ನು ಅಲಂಕರಿಸಬಾರದೆAಬ ನಿಯಮ ರಾಜ್ಯ ಫುಟ್ಬಾಲ್ ಸಂಸ್ಥೆಯಲ್ಲಿರುವುದರಿAದ, ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ ಅವರು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದು, ನೂತನವಾಗಿ ಪಾಣತ್ತಲೆ ಜಗದೀಶ್ ಮಂದಪ್ಪ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಿದರು. ಜಗದೀಶ್ ಅವರಿಗೆ ನಿರ್ಗಮಿತ ಅಧ್ಯಕ್ಷರು ಅಧಿಕಾರ ಹಸ್ತಾಂತರಿಸಿದರು. ಜಿಲ್ಲಾ ಮಹಿಳಾ ತಂಡದ ಅಧ್ಯಕ್ಷರಾಗಿ ಬಿ.ಎ. ದೇಚಮ್ಮಾ ಅವರನ್ನು ಅವಿರೋಧ ಆಯ್ಕೆ ಮಾಡಲಾಯಿತು. ನಿರ್ಗಮಿತ ಅಧ್ಯಕ್ಷ ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ ಅವರನ್ನು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಮಹಾಪೋಷಕರಾಗಿ ಅವಿರೋಧ ಆಯ್ಕೆ ಮಾಡಲಾಯಿತು.
ರಾಜ್ಯ ಫುಟ್ಬಾಲ್ ಸಂಸ್ಥೆಯ ಕಾರ್ಯದರ್ಶಿ ಸತ್ಯನಾರಾಯಣ ಅವರನ್ನು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಪರವಾಗಿ ಮೋಹನ್ ಅಯ್ಯಪ್ಪ ಸನ್ಮಾನಿಸಿ, ಗೌರವಿಸಿದರು.
ಗೌರವ ಕಾರ್ಯದರ್ಶಿ ಪಿ.ಎ. ನಾಗೇಶ್ ವರದಿ ವಾಚಿಸಿದರೆ, ವಾರ್ಷಿಕ ಲೆಕ್ಕಪತ್ರ ಮಂಡನೆಯನ್ನು ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಖಜಾಂಚಿ ದೀಪು ಮಾಚಯ್ಯ ಮಂಡಿಸಿದರು. ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಗೌರವ ಕಾರ್ಯದರ್ಶಿ ಹಾಗೂ ತೀರ್ಪುಗಾರ ಸಂಘದ ಅಧ್ಯಕ್ಷ ಪಿ.ಎ. ನಾಗೇಶ್ ಸ್ವಾಗತಿಸಿ, ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಸದಸ್ಯ ಲಿಜೇಶ್ ಅಮ್ಮತ್ತಿ ವಂದಿಸಿದರು. ಜಿಲ್ಲಾ ಫುಟ್ಬಾಲ್ ಸಂಸ್ಥೆಯ ತೀರ್ಪುಗಾರ ಇಸ್ಮಾಯಿಲ್ ಕಂಡಕರೆ ಕಾರ್ಯಕ್ರಮವನ್ನು ನಿರೂಪಿಸಿದರು.
ಉಪಾಧ್ಯಕ್ಷ ಪಿ.ಕೆ. ಜಗದೀಶ್, ಜಿಲ್ಲಾ ಫುಟ್ಬಾಲ್ ಸಂಸ್ಥೆಯ ಮಾಜಿ ಕಾರ್ಯದರ್ಶಿ ಬಿ.ಸಿ. ದಿನೇಶ್, ಸದಸ್ಯರಾದ ರಕ್ಷಿತ್, ತೀರ್ಪುಗಾರರಾದ ಇಬ್ರಾಹಿಂ, ಧೀರೆಜ್ ರೈ, ಉಸ್ಮಾನ್, ದರ್ಶನ್ ಸುಕುಮಾರ್ ಹಾಗೂ ಎಲ್ಲಾ ಫುಟ್ಬಾಲ್ ಕ್ಲಬ್‌ಗಳ ಸದಸ್ಯರು ಹಾಜರಿದ್ದರು.