ಸೋಮವಾರಪೇಟೆ, ಆ. ೩೧: ಪರಿಸರ ಸ್ನೇಹಿ ಅರಿಶಿಣ ಗಣೇಶೋತ್ಸವ-೨೦೨೧ರ ಅಂಗವಾಗಿ ಅರಿಶಿಣ ಗಣೇಶೋತ್ಸವ ಕುರಿತು ಜನಜಾಗೃತಿ ಕಾರ್ಯಕ್ರಮ ಸ್ಥಳೀಯ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ನಡೆಯಿತು.
ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌ನ ಕೊಡಗು ಜಿಲ್ಲಾ ಸಮಿತಿ ಹಾಗೂ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.
ಅರಿಶಿಣ ಗಣೇಶೋತ್ಸವ ಆಚರಣೆ ಕುರಿತು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ ವತಿಯಿಂದ ಲೆವಿಸ್ಟಾ ಇನ್ ಸ್ಟಂಟ್ ಕಾಫಿ ಕಂಪನಿ ಆಶ್ರಯದಲ್ಲಿ ಹೊರತಂದಿರುವ ಭಿತ್ತಿಪತ್ರ ಮತ್ತು ಸ್ಟಿಕ್ಕರ್‌ಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಕೆ. ಪಾಂಡು ಬಿಡುಗಡೆಗೊಳಿಸಿದರು.
ನಂತರ ಮಾತನಾಡಿ, ಕೋವಿಡ್ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ರೋಗ ನಿರೋಧಕ ಶಕ್ತಿ ಹೊಂದಿರುವ ಅರಿಶಿಣದಿಂದ ಗಣೇಶ ಮೂರ್ತಿಯನ್ನು ಮನೆಯಲ್ಲೇ ತಯಾರಿಸಿ ಪೂಜಿಸಿದ ನಂತರ ಮನೆಯಲ್ಲೇ ವಿಸರ್ಜಿಸುವ ಕುರಿತು ಶಿಕ್ಷಕರು ಜನಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.
ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಸದಾಶಿವಯ್ಯ ಪಲ್ಲೇದ್, ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಬಿ.ಆರ್. ಕುಮಾರ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಪಿ. ಧರ್ಮಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಕೆ. ಬಸವರಾಜ್, ಶಿಕ್ಷಕರ ವಿವಿಧ ಸಂಘಟನೆಯ ಪ್ರಮುಖರಾದ ಎಸ್.ಎ. ಯೋಗೇಶ್, ಎ.ಎ. ಲಕ್ಷ್ಮಣ, ಸುರೇಶ್, ಇಸಿಓ ಕೆ.ಬಿ.ರಾಧಾಕೃಷ್ಣ, ಬಿಆರ್‌ಪಿ ಎಸ್.ಎನ್. ಲೋಕೇಶ್, ಲಿಪಿಕರ ಸಂಘದ ಪದಾಧಿಕಾರಿ ಟಿ.ಬಿ. ಚಿದಾನಂದ ಅವರುಗಳು ಇದ್ದರು.
ಇದೇ ಸಂದರ್ಭ ಪರಿಸರ ಸ್ನೇಹಿ ಅರಿಶಿಣ ಗಣೇಶ ಆಚರಣೆ ಕುರಿತ ಭಿತ್ತಿಪತ್ರ ಮತ್ತು ಸ್ಟಿಕ್ಕರ್‌ಗಳನ್ನು ಶಾಲೆಗಳಿಗೆ ನೀಡುವ ಮೂಲಕ ಪರಿಸರ ಜಾಗೃತಿ ಮೂಡಿಸಲು ತಿಳಿಸಲಾಯಿತು.