ಸೋಮವಾರಪೇಟೆ, ಆ. ೩೧: ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ಮಂಡಲ ಯುವ ಮೋರ್ಚಾ ಕಾರ್ಯಕಾರಿಣಿ ಸಭೆ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಭಾಗವಹಿಸಿದ್ದ ಮಂಡಲ ಅಧ್ಯಕ್ಷ ಮನುಕುಮಾರ್ ರೈ ಮಾತನಾಡಿ, ದೇಶದ ಶಕ್ತಿ ಯುವ ಜನಾಂಗವಾಗಿದ್ದು, ಇವರಲ್ಲಿ ರಾಜಕೀಯ ಜಾಗೃತಿ ಮೂಡಿಸುವ ಮೂಲಕ ಬಿಜೆಪಿ ಪಕ್ಷದ ಸಂಘಟನೆಯಲ್ಲಿ ತೊಡಗುವಂತೆ ಮಾಡಬೇಕು ಎಂದರು.
ಪ್ರಸ್ತುತ ಯುವ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಯನ್ನು ಬೆಂಬಲಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಭ್ರಷ್ಟಾಚಾರ ರಹಿತ ಆಡಳಿತ ಎಲ್ಲರಿಗೂ ಮಾದರಿಯಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್, ಆಯುಷ್ಮಾನ್, ಮೇಕ್ ಇನ್ ಇಂಡಿಯಾ, ಮುದ್ರಾ ಸೇರಿದಂತೆ ನೂರಾರು ಜನಪ್ರಿಯ ಯೋಜನೆಗಳು ಜನಮನ ತಲುಪಿವೆ ಎಂದರು.
ಕೇAದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು, ಸರ್ಕಾರದ ಎಲ್ಲಾ ಯೋಜನೆಗಳೂ ಸಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಯುವ ಮೋರ್ಚಾ ಕಾರ್ಯನಿರ್ವಹಿಸಬೇಕು. ಮೋರ್ಚಾ ವನ್ನು ಹೆಚ್ಚು ಬಲಪಡಿಸಬೇಕು ಎಂದರು. ಯುವ ಮೋರ್ಚಾ ಮಂಡಲ ಅಧ್ಯಕ್ಷ ಚಂದ್ರಶೇಖರ್ ಹೇರೂರು ಮಾತನಾಡಿ, ಮೋರ್ಚಾ ದಿಂದ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ, ರಾಜ್ಯ ಸಮಿತಿ ಸದಸ್ಯ ಮಹೇಶ್ ತಿಮ್ಮಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಮಾದಪ್ಪ, ಕಾರ್ಯದರ್ಶಿ ರೂಪಾ ಸತೀಶ್, ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಸಾದ್, ಯಶ್ವಿನ್, ಮಂಡಲ ಪ್ರಧಾನ ಕಾರ್ಯದರ್ಶಿ ಮೋಹಿತ್, ಪದ್ಮನಾಭ ಸೇರಿದಂತೆ ಇತರರು ಭಾಗವಹಿಸಿದ್ದರು.