ಕೂಡಿಗೆ, ಆ. ೩೧: ಹೆಬ್ಬಾಲೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎಸ್. ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ವಸತಿ ರಹಿತರಿಗೆ ನಿವೇಶನ ನೀಡಲು ಕಾಯ್ದಿರಿಸಿದ ಜಾಗವನ್ನು ಸಮತಟ್ಟು ಮಾಡಿ ಈಗಾಗಲೇ ತಯಾರಿಸಿದ ನೀಲಿ ನಕ್ಷೆಯ ಅನುಗುಣವಾಗಿ ನಿವೇಶನದ ನಕ್ಷೆಯ ಮಾದರಿಯಲ್ಲಿ ನಿವೇಶನ ಹಂಚುವ ಪ್ರಕ್ರಿಯೆ ಪ್ರಾರಂಭ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.

ನಂತರ ಸಭೆಯಲ್ಲಿ ಗ್ರಾಮ ಪಂಚಾಯಿತಿಗೆ ಸೇರಿದ ರುದ್ರ ಭೂಮಿಯ ಜಾಗಕ್ಕೆ ಸಮರ್ಪಕವಾದ ಬೇಲಿ ನಿರ್ಮಾಣ ಮತ್ತು ಅದರ ಬಳಕೆಗೆ ಅನುವು ಮಾಡಿಕೊಡುವ ಬಗ್ಗೆ ಚರ್ಚೆಗಳು ನಡೆದವು. ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಹೆಚ್ಚುವರಿ ಕಾಮಗಾರಿಗಳ ಸೇರ್ಪಡೆಯ ಬಗ್ಗೆ ಆಯಾ ವಾರ್ಡ್ನ ಸದಸ್ಯರು ತಮ್ಮ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ೧೫ನೇ ಹಣಕಾಸು ಯೋಜನೆಯ ವಿವಿಧ ಕಾಮಗಾರಿಗಳ ಕ್ರಿಯಾ ಯೋಜನೆ ಸಂಬAಧಿಸಿದAತೆ ಚರ್ಚೆಗಳು ನಡೆದವು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಹೆಚ್.ಎಸ್. ಮಂಜುನಾಥ ಮಾತನಾಡಿ, ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳುವ ಅವಕಾಶವಿದ್ದು ಅದರ ಸದುಪಯೋಗವನ್ನು ಆಯಾ ವಾರ್ಡ್ ಸದಸ್ಯರು ಬಳಕೆ ಮಾಡಿಕೊಂಡು ವಾರ್ಡ್ ಕಾಮಗಾರಿಗಳನ್ನು ಪೂರ್ಣಗೊಳಿಸಲು ಮುಂದಾಗಬೇಕು ಎಂದರು.

ಅಭಿವೃದ್ಧಿ ಅಧಿಕಾರಿ ರಾಕೇಶ್ ಸಭೆಗೆ ಸಾರ್ವಜನಿಕರಿಂದ ಬಂದ ಅರ್ಜಿಗಳ ಮಾಹಿತಿಯನ್ನು ತಿಳಿಸಿದರು. ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಬರುವ ಕಾಮಗಾರಿಗಳ ಪಟ್ಟಿಯನ್ನು ಸವಿಸ್ತಾರವಾಗಿ ತಿಳಿಸಿದರು.

ಸಭೆಯಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಅರುಣಕುಮಾರಿ ಸೇರಿದಂತೆ ಸರ್ವ ಸದಸ್ಯರು ಹಾಜರಿದ್ದರು.