ಮಡಿಕೇರಿ, ಆ. ೩೧: ಜಿಲ್ಲೆಯಲ್ಲಿ ಮಂಗಳವಾರ ೭೩ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ೬೧ ಆರ್‌ಟಿಪಿಸಿಆರ್ ಮತ್ತು ೧೨ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ ೨೬, ಸೋಮವಾರಪೇಟೆ ತಾಲೂಕಿನಲ್ಲಿ ೩೧, ವೀರಾಜಪೇಟೆ ತಾಲೂಕಿನಲ್ಲಿ ೧೬ ಹೊಸ ಪ್ರಕರಣಗಳು ಕಂಡುಬAದಿವೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೩,೬೯೦ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧೨ ಮಂದಿ ಗುಣಮುಖ ರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೨,೬೯೯ ಮಂದಿ ಗುಣಮುಖರಾಗಿ ದ್ದಾರೆ. ೫೭೭ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧ ಸಾವು ಉಂಟಾಗಿದ್ದು, ಇದುವರೆಗೆ ಒಟ್ಟು ೪೧೪ ಮರಣ ಪ್ರಕರಣಗಳು ವರದಿಯಾಗಿವೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೮೨ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. ೧.೪೨ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.