ಶನಿವಾರಸಂತೆ, ಆ. ೩೧: ಯಾವುದೇ ಜಾತಿ ಧರ್ಮದವನಾದರೂ ದೇಶದ ಸಂವಿಧಾನ ಎಲ್ಲರಿಗೂ ಸಮಾನ ಹಕ್ಕನ್ನು ನೀಡಿದೆ ಎಂದು ಸಮಾಜ ಸುಧಾರಕ ಹೆಚ್.ಕೆ. ವಿವೇಕಾನಂದ ಭಾರತಿ ವಿದ್ಯಾಸಂಸ್ಥೆಯಲ್ಲಿ ಜ್ಞಾನಧೀಕ್ಷಾ ಕಾರ್ಯಕ್ರಮದಲ್ಲಿ ಹೇಳಿದರು.

ಬೆಂಗಳೂರಿನ ಇವರು ಬೆಳಗಾವಿಯಿಂದ ಪಾದಯಾತ್ರೆ ಹೊರಟು ಅನೇಕ ಶಿಕ್ಷಣ ಸಂಸ್ಥೆಗಳು, ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಮಾನವೀಯ ಮೌಲ್ಯಗಳ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಈ ಸಂದರ್ಭ ಸಂಸ್ಥೆಯ ಅಧ್ಯಕ್ಷ ಎನ್.ಕೆ. ಅಪ್ಪಸ್ವಾಮಿ, ಗೌರವ ಕಾರ್ಯದರ್ಶಿ ಕೆ.ಎಂ. ಜಗನ್‌ಪಾಲ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಹೆಚ್.ಬಿ. ಜಯಮ್ಮ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಎ. ಆದಿಲ್‌ಪಾಶ, ಸಂಸ್ಥೆಯ ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಸಹಶಿಕ್ಷಕರು ಉಪಸ್ಥಿತರಿದ್ದರು.