ಸುಂಟಿಕೊಪ್ಪ, ಸೆ. ೨: ಇಲ್ಲಿಗೆ ಸಮೀಪದ ಕೆದPಲ್ ಗ್ರಾಮ ಪಂಚಾಯಿತಿ ವತಿಯಿಂದ ಕಸ ವಿಲೇವಾರಿ ಜಾಗಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು. ಕೆದಕಲ್ ಗ್ರಾಮ ಪಂಚಾಯಿತಿಯಲ್ಲಿ ಹಲವಾರು ವರ್ಷಗಳಿಂದ ಕಸವಿಲೇವಾರಿ ಘಟಕ ಸ್ಥಾಪಿಸಲು ಪಂಚಾಯಿತಿ ಸಭೆüಯಲ್ಲಿ ನಿರ್ಣಯ ಕೈಗೊಂಡಿದ್ದು ಸೂಕ್ತ ಜಾಗವಿಲ್ಲದ ಕಾರಣ ಇದೀಗ ಪಂಚಾಯಿತಿ ಕಚೇರಿಯ ಹಿಂಭಾಗದಲ್ಲಿ ಕಸ ವಿಲೇವಾರಿ ಸ್ಥಾಪಿಸಲು ಆಡಳಿತ ಮಂಡಳಿ ಮುಂದಾಗಿದ್ದು ಈ ಜಾಗದಲ್ಲಿ ಭೂಮಿ ಪೂಜೆಯನ್ನು ಪಂಚಾಯಿತಿ ಅಧ್ಯಕ್ಷೆ ನಿಶ್ಮಿತ, ಮತ್ತು ಉಪಾಧ್ಯಕ್ಷ ಸಂಜು ಪೊನ್ನಪ್ಪ, ಅಭಿವೃದ್ಧಿ ಅಧಿಕಾರಿ ರಾಜ ಶೇಖರ್ ನೆರವೇರಿಸಿದರು. ಈ ಸಂದರ್ಭ ಪಂಚಾಯಿತಿ ಸದಸ್ಯರು, ಸಾರ್ವಜನಿಕರು ಹಾಜರಿದ್ದರು.