ಮಡಿಕೇರಿ, ಸೆ. ೧: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ೨೦೨೧ ನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು ೧೯೬೭ರ ನಿಯಮ ೧೦ ಬಿ ಮತ್ತು ಅಬಕಾರಿ ಕಾಯ್ದೆ ೧೯೬೫ರ ಕಲಂ ೨೧ ರ ಅಡಿಯಲ್ಲಿ ಪ್ರತ್ಯಾಯೋಜಿತವಾಗಿರುವ ಅಧಿಕಾರದಂತೆ ನೀತಿಸಂಹಿತೆ ಜಾರಿಯಲ್ಲಿರುವ ವೀರಾಜಪೇಟೆ ಮತ್ತು ಸೋಮವಾರಪೇಟೆ ಪಟ್ಟಣ ಪಂಚಾಯತ್‌ಗಳ, ವಾರ್ಡ್ಗಳ ೩ ಕಿ.ಮೀ. ವ್ಯಾಪ್ತಿಯಲ್ಲಿ ತಾ.೨ ರ ಬೆಳಗ್ಗೆ ೭ ಗಂಟೆಯಿAದ ತಾ. ೩ ರ ಮಧ್ಯರಾತ್ರಿ ೧೨ ಗಂಟೆಯವರೆಗೆ ಎಲ್ಲಾ ವಿಧದ ಮದ್ಯಗಳ ತಯಾರಿಕೆ, ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಹೋಟೆಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಚಾರುಲತಾ ಸೋಮಲ್ ಆದೇಶಿಸಿದ್ದಾರೆ.

ಚುನಾವಣೆ ನಡೆಯಲಿರುವ ವಾರ್ಡ್ ವಿವರ: ವೀರಾಜಪೇಟೆ ಪಟ್ಟಣ ಪಂಚಾಯತ್‌ನ ೧೩ನೇ ವಾರ್ಡ್, ಸೋಮವಾರಪೇಟೆ ಪಟ್ಟಣ ಪಂಚಾಯತ್‌ನ ೦೧ ಮತ್ತು ೩ನೇ ವಾರ್ಡ್ಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.