ಮಡಿಕೇರಿ,ಸೆ.೧ : ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ತಾ. ೩ ರಂದು ಮೊಸರು ಕುಡಿಕೆ ಹಾಗೂ ಛದ್ಮವೇಶ ಸ್ಪರ್ಧೆ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
ಸಂಜೆ ೪ ಗಂಟೆಗೆ ೫ ವರ್ಷದೊಳಗಿನ ಮಕ್ಕಳಿಗೆ ಸ್ಪರ್ಧೆ ನಡೆಯಲಿದ್ದು, ಆಸಕ್ತರು ೯೪೪೯೬೯೬೩೫೫, ೭೦೧೯೨೫೨೩೬೬ ಸಂಖ್ಯೆಗೆ ಕರೆ ಮಾಡಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.