ಸೋಮವಾರಪೇಟೆ, ಸೆ. ೨: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ತಾಲೂಕು ಕಾರ್ಮಿಕ ಇಲಾಖೆ ಮೂಲಕ ಅಸಂಘಟಿತ ಕಾರ್ಮಿಕರಿಗೆ ಸುರಕ್ಷಾ ಕಿಟ್ ಹಾಗೂ ಪೌಷ್ಟಿಕ ಆಹಾರ ಕಿಟ್‌ಗಳನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ವಿತರಿಸಿದರು.

ಶಾಸಕರ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಕಿಟ್ ವಿತರಿಸಲಾಯಿತು. ಈ ಸಂದರ್ಭ ತಾಲೂಕು ಕಾರ್ಮಿಕ ಇಲಾಖಾಧಿಕಾರಿ ಲೀನಾ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.