ಮಡಿಕೇರಿ, ಸೆ.೧: ಗೌರಿ ಗಣೇಶ ಹಬ್ಬ ಆಚರಣೆ ಸಂಬAಧ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಅವರ ಉಪಸ್ಥಿತಿಯಲ್ಲಿ ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಿತು.

ಸಭೆಯ ಆರಂಭದಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳಿಂದ ಮಾಹಿತಿ ಪಡೆದು ಮಾತನಾಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು, ಜಿಲ್ಲೆಯಲ್ಲಿ ಕೋವಿಡ್-೧೯ ಪಾಸಿಟಿವಿಟಿ ಪ್ರಮಾಣವು ಎರಡಕ್ಕಿಂತ ಹೆಚ್ಚು ಇದ್ದು, ಕೋವಿಡ್ ಪರಿಸ್ಥಿತಿ ಅವಲೋಕಿಸಿದರೆ ಇನ್ನೂ ಸಹ ಗಂಭೀರವಾಗಿದೆ. ಆದ್ದರಿಂದ ಕಳೆದ ಬಾರಿಯಂತೆ ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಕೋರಿದರು.

ಕೊಡಗು ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಮುಂದುವರಿದಿದೆ. ಆದ್ದರಿಂದ ಸರ್ಕಾರದಿಂದ ಕಾಲ ಕಾಲಕ್ಕೆ ಹೊರಡಿಸಲಾಗುವ ಮಾರ್ಗಸೂಚಿ ಮತ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದರು. ಕೋವಿಡ್-೧೯ ಪಾಸಿಟಿವಿಟಿ ಪ್ರಮಾಣವು ಎರಡಕ್ಕಿಂತ ಕಡಿಮೆಯಾಗದಿರುವ ಹಿನ್ನೆಲೆ ಹಲವು ನಿರ್ಬಂಧಗಳು ಮುಂದುವರೆದಿವೆ. ಕೊಡಗು ಜಿಲ್ಲೆಗೆ ಸಂಬAಧಿಸಿದAತೆ ಯಾವುದೇ ರೀತಿಯ ವಿನಾಯಿತಿ ಇರುವುದಿಲ್ಲ. ಆದ್ದರಿಂದ ಸರ್ಕಾರದ ನಿಯಮಗಳನ್ನು ಚಾಚು ತಪ್ಪದೇ ಪಾಲಿಸಬೇಕು.

ಗೌರಿ ಗಣೇಶೋತ್ಸವ ಆಚರಣೆ ಸಂಬAಧ ಸರ್ಕಾರದಿಂದ ಮಾರ್ಗಸೂಚಿ ಬರಲಿದ್ದು, ನಂತರ ಮಾಹಿತಿ ನೀಡಲಾಗುವುದು. ಇಂದು ನಡೆದಿರುವ ಸಭೆಯಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಸರ್ಕಾರದ ಗಮನಕ್ಕೆ ತರಲಾಗುವುದು. ಈಗಿರುವ ನಿಯಮವನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು.

ಸಭೆಯ ಆರಂಭದಲ್ಲಿ ಉತ್ಸವ ಸಮಿತಿಗಳ ಪರವಾಗಿ ಮಾತನಾಡಿದ ಚೇತನ್ ಅವರು ಕಳೆದ ಎರಡು ವರ್ಷಗಳಿಂದ ಕೊರೊನಾದಿಂದಾಗಿ ಸರ್ಕಾರದ ನಿಯಮಗಳನ್ನು ಪಾಲಿಸಿಕೊಂಡು ಗಣೇಶೋತ್ಸವ ಆಚರಿಸಲಾಗುತ್ತಿದ್ದು, ಅವಕಾಶ ನೀಡಬೇಕು ಎಂದು ಕೋರಿದರು.

ಅರುಣ್ ಶೆಟ್ಟಿ ಮಾತನಾಡಿ ಸರ್ಕಾರದ ನಿರ್ದೇಶನದಂತೆ ಕಳೆದ ಎರಡು ವರ್ಷದಿಂದ ಸರಳ ಹಾಗೂ ಸಾಂಪ್ರದಾಯಿಕವಾಗಿ ಗಣೇಶೋತ್ಸವ ವನ್ನು ಆಚರಿಸಲಾಗುತ್ತದೆ. ಕಳೆದ ಬಾರಿಯಂತೆ ಅವಕಾಶ ನೀಡಬೇಕು ಎಂದು ಅವರು ಕೋರಿದರು. ಸಾಯಿನಾಥ್ ನಾಯಕ್ ಅವರು ವೀರಾಜಪೇಟೆ ಪಟ್ಟಣದಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸಿಕೊಂಡು ಗೌರಿ ಗಣೇಶೋತ್ಸವ ಆಚರಿಸ ಲಾಗುತ್ತಿದೆ. ಅದನ್ನು ಮುಂದುವರೆಸ ಬೇಕು ಎಂದು ಕೋರಿದರು.

ಬಿ.ಕೆ.ಜಗದೀಶ್ ಹಾಗೂ ಪ್ರತಾಪ್ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಗಣೇಶೋತ್ಸವವನ್ನು ಆಚರಿಸ ಲಾಗುತ್ತಿದೆ. ಆದ್ದರಿಂದ ಸಾರ್ವಜನಿಕ ವಾಗಿ ಗಣೇಶೋತ್ಸವಕ್ಕೆ ಅವಕಾಶ ಮಾಡಬೇಕು ಎಂದು ಕೋರಿದರು. ಚರಣ್ ಮಾತನಾಡಿ ಗಣಪತಿ ವಿಸರ್ಜನೆಗೆ ಸೀಮಿತವಾಗಿಯಾದರೂ ಜನರ ಪಾಲ್ಗೊಳ್ಳುವಿಕೆಗೆ ಅವಕಾಶ ನೀಡಬೇಕು ಎಂದರು.

ಪೌರಾಯುಕ್ತ ರಾಮದಾಸ್ ಅವರು ಕೋವಿಡ್ ನಿಯಮ ಮತ್ತು ಮಾರ್ಗಸೂಚಿಯನ್ನು ಪಾಲಿಸಿಕೊಂಡು ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲಾಗುತ್ತದೆ ಎಂದು ಹೇಳಿದರು. ಜಿಲ್ಲಾ ಪರಿಸರ ಅಧಿಕಾರಿ ಗಣೇಶನ್ ಪರಿಸರ ಕಾಪಾಡುವ ನಿಟ್ಟಿನಲ್ಲಿ ‘ಅರಿಶಿಣ ಗಣೇಶ ಮೂರ್ತಿ’ ಬಳಸುವ ನಿಟ್ಟಿನಲ್ಲಿ ಉತ್ತೇಜಿಸಲಾಗುತ್ತದೆ. ಆ ನಿಟ್ಟಿನಲ್ಲಿ ಪರಿಸರ ಇಲಾಖೆ ಹಾಗೂ ವಿಜ್ಞಾನ ಪರಿಷತ್ ವತಿಯಿಂದ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಡಿವೈಎಸ್‌ಪಿ ಜಯಕುಮಾರ್ ಅವರು ವೀರಾಜಪೇಟೆ ತಾಲೂಕಿನಲ್ಲಿ ಪ್ರಮುಖವಾಗಿ ೬೦ ಕಡೆಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸ ಲಾಗುತ್ತದೆ. ರಾತ್ರಿ ವೇಳೆಯಲ್ಲಿ ಮೆರವಣಿಗೆಗೆ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿ ಅವರ ಗಮನಕ್ಕೆ ತಂದರು.

ಮಡಿಕೇರಿ ಡಿವೈಎಸ್‌ಪಿ ಗಜೇಂದ್ರ ಪ್ರಸಾದ್ ಅವರು ಮಡಿಕೇರಿ ತಾಲೂಕಿನಲ್ಲಿ ಸುಮಾರು ೯೩ ಕಡೆಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಹಗಲು ವೇಳೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶ ನೀಡಬೇಕು ಎಂದು ಅವರು ಕೋರಿದರು. ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಎಷ್ಟು ಜನರು ತೆರಳಬೇಕು ಎಂಬ ಬಗ್ಗೆ ಮಾಹಿತಿ ನೀಡುವಂತೆ ಅವರು ಮನವಿ ಮಾಡಿದರು.

ಪೊಲೀಸ್ ಇನ್ಸ್ಪೆಕ್ಟರ್ ಮೇದಪ್ಪ ಅವರು ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಮುಂದುವರಿದಿರುವುದರಿAದ ರಾತ್ರಿ ವೇಳೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶ ಇರುವುದಿಲ್ಲ. ಪೊಲೀಸ್ ಠಾಣಾ ಹಂತದಲ್ಲಿಯೂ ಸಹ ಸ್ಥಳೀಯರೊಂದಿಗೆ ಚರ್ಚಿಸ ಲಾಗುತ್ತದೆ ಎಂದು ಅವರು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡದೆ ಸರಳವಾಗಿ ಆಚರಿಸುವಂತೆ ಕೋರಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರಾಜು, ಪೊಲೀಸ್ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ಇತರರು ಇದ್ದರು.