ಸೋಮವಾರಪೇಟೆ, ಸೆ. ೧: ಸೋಮವಾರಪೇಟೆ ಪಟ್ಟಣ ಪಂಚಾಯತ್‌ನ ಎರಡು ಕ್ಷೇತ್ರಗಳಿಗೆ ಉಪಚುನಾವಣೆಯ ಹಿನ್ನಲೆಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜಾ ಉತ್ತಪ್ಪ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರ ತಂಡ ಮನೆ ಮನೆಗೆ ತೆರಳಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಮತಯಾಚನೆ ಮಾಡಿದರು.

ಮತಯಾಚನೆಯಲ್ಲಿ ವಿಧಾನ ಪರಿಷತ್ ಸದಸ್ಯೆ ವೀಣಾಅಚ್ಚಯ್ಯ, ಮಾಜಿ ಸಚಿವ ಬಿ.ಎ. ಜೀವಿಜಯ, ಕೆಪಿಸಿಸಿ ಸಂಯೋಜಕರಾದ ಹೆಚ್.ಎಂ. ನಂದಕುಮಾರ್, ಮಂಜುನಾಥ್ ಗುಂಡೂರಾವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್‌ಕುಮಾರ್, ಮಾಜಿ ಬ್ಲಾಕ್ ಅಧ್ಯಕ್ಷ ಕೆ.ಎಂ. ಲೋಕೇಶ್, ಎಸ್.ಎಂ. ಚಂಗಪ್ಪ, ರಾಜೀವ್‌ಗಾಂಧಿ ಪಂಚಾಯತ್‌ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರಾ ಮೈನಾ, ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಕೆ.ಎ. ಆದಂ, ಶೀಲಾ ಡಿಸೋಜ, ಚೇತನ್, ಜಯೇಂದ್ರ, ಮಂಜುನಾಥ್, ರಾಜಪ್ಪ ಸೇರಿದಂತೆ ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು.