*ವೀರಾಜಪೇಟೆ, ಸೆ. ೫: ಕೋವಿಡ್ ಪರಿಸ್ಥಿತಿಯ ನಿರ್ವಹಣೆ ಯಲ್ಲಿ ಜಿಲ್ಲೆಯ ಶಿಕ್ಷಕರ ನಿರಂತರ ಸೇವೆ ಹಾಗೂ ಪಾತ್ರ ಅಪಾರವಾಗಿದೆ ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.

ವೀರಾಜಪೇಟೆಯ ಸಂತ ಅನ್ನಮ್ಮ ಶಾಲೆಯ ದ್ವಿಶತಮಾನೋತ್ಸವ ಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆಯನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ನಾವೂ ಎಷ್ಟೇ ದೊಡ್ಡವರಾದರೂ, ಯಾವುದೇ ಸ್ಥಾನ ಅಲಂಕರಿಸಿದರೂ ಶಿಕ್ಷಕರನ್ನು ಎಂದಿಗೂ ಮರೆಯುವುದಿಲ್ಲ. ಕೊರೊನಾ ಪರಿಸ್ಥಿತಿಯಲ್ಲಿ ಶಿಕ್ಷಕರು ಕೋವಿಡ್ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈಗಾಗಲೇ ರಾಜ್ಯದ ಕೊಡಗು ಹೊರತುಪಡಿಸಿ ಬಹುತೇಕ ಎಲ್ಲಾ ಜಿಲ್ಲೆಯಲ್ಲಿ ಶಾಲೆಗಳು *ವೀರಾಜಪೇಟೆ, ಸೆ. ೫: ಕೋವಿಡ್ ಪರಿಸ್ಥಿತಿಯ ನಿರ್ವಹಣೆ ಯಲ್ಲಿ ಜಿಲ್ಲೆಯ ಶಿಕ್ಷಕರ ನಿರಂತರ ಸೇವೆ ಹಾಗೂ ಪಾತ್ರ ಅಪಾರವಾಗಿದೆ ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.

ವೀರಾಜಪೇಟೆಯ ಸಂತ ಅನ್ನಮ್ಮ ಶಾಲೆಯ ದ್ವಿಶತಮಾನೋತ್ಸವ ಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ತಾಲೂಕು ಶಿಕ್ಷಕರ ದಿನಾಚರಣೆ ಸಮಿತಿ ಸಹಯೋಗದಲ್ಲಿ ಶಿಕ್ಷಕರ ದಿನಾಚರಣೆಯನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ನಾವೂ ಎಷ್ಟೇ ದೊಡ್ಡವರಾದರೂ, ಯಾವುದೇ ಸ್ಥಾನ ಅಲಂಕರಿಸಿದರೂ ಶಿಕ್ಷಕರನ್ನು ಎಂದಿಗೂ ಮರೆಯುವುದಿಲ್ಲ. ಕೊರೊನಾ ಪರಿಸ್ಥಿತಿಯಲ್ಲಿ ಶಿಕ್ಷಕರು ಕೋವಿಡ್ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈಗಾಗಲೇ ರಾಜ್ಯದ ಕೊಡಗು ಹೊರತುಪಡಿಸಿ ಬಹುತೇಕ ಎಲ್ಲಾ ಜಿಲ್ಲೆಯಲ್ಲಿ ಶಾಲೆಗಳು ಶಿಕ್ಷಕರು ಅಧ್ಯಯನಶೀಲರಾಗಬೇಕು ಎಂದು ಕರೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ವನಜಾಕ್ಷಿ ಪ್ರಸ್ತಾವಿಕವಾಗಿ ಮಾತನಾಡಿ, ಕೊರೊನಾ ಪರಿಸ್ಥಿತಿ ನಡುವೆ ಎಲ್ಲಾ ಶಾಲೆಗಳ ಶಿಕ್ಷಕರು ಮಕ್ಕಳಿಗೆ ಕಲಿಕೆಗೆ ನೆರವಾಗಿರುವುದನ್ನು ಶ್ಲಾಘಿಸಿದ ಅವರು, ತಾಲೂಕಿನ ೩೫೦ ಶಿಕ್ಷಕರು ಕೋವಿಡ್ ಕರ್ತವ್ಯದಲ್ಲಿ ನಿರತರಾಗಿ ದ್ದಾರೆ ಎಂದು ಮಾಹಿತಿ ನೀಡಿದರು.

ವೇದಿಕೆಯಲ್ಲಿ, ತಾಲೂಕು ಕಾರ್ಯನಿರ್ವಹಣಾಧಿಕಾರಿ ಅಪ್ಪಣ್ಣ, ಅಕ್ಷರ ದಾಸೋಹದ ಮುಖ್ಯಸ್ಥ ರಾಜೇಶ್, ಮನು ಸೋಮಯ್ಯ ಉಪಸ್ಥಿತರಿದ್ದರು.

ಲಾಲ್ ಕುಮಾರ್ ಹಾಗೂ ಸಂಗಡಿಗರು ನಾಡಗೀತೆ ಹಾಗೂ ರೈತಗೀತೆಯನ್ನು ಹಾಡಿದರು. ಕಾರ್ಯಕ್ರಮದಲ್ಲಿ ಶಿಕ್ಷಕಿ ಗಾಯಿತ್ರಿ ಸ್ವಾಗತಿಸಿದರು. ಗೀತಾಂಜಲಿ ಕಾರ್ಯಕ್ರಮ ನಿರೂಪಿಸಿದರು. ಪ್ರವೀಣ್ ವಂದಿಸಿದರು.