ಬೆಂಗಳೂರು, ಸೆ. ೫: ಕೊರೊನಾ ಸಂದಿಗ್ಧ ಪರಿಸ್ಥಿತಿಯ ನಡುವೆ ತಾ.೧೦ರಂದು ಗಣೇಶೋತ್ಸವವನ್ನು ಸಾರ್ವಜನಿಕವಾಗಿ ಆಚರಿಸಲು ಹಲವು ಷರತ್ತುಗಳನ್ನು ವಿಧಿಸಿ ರಾಜ್ಯ ಸರಕಾರ ಅನುಮತಿ ನೀಡಿದ್ದು, ಈ ಬಗ್ಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಗಣೇಶೋತ್ಸವವನ್ನು ೫ ದಿನಗಳಿಗೆ ಮಾತ್ರ ಸೀಮಿತವಾಗಿ ದೇವಾಲಯಗಳು, ಮನೆಗಳಲ್ಲಿ ಹಾಗೂ ಸರ್ಕಾರಿ ಅಥವಾ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಟ ಸಂಖ್ಯೆಯೊAದಿಗೆ ಆಚರಿಸಬಹುದು. ಸಾರ್ವಜನಿಕ ಸ್ಥಳಗಳಲ್ಲಿ ೪ ಅಡಿ, ಮನೆಗಳಲ್ಲಿ ೨ ಅಡಿ ಎತ್ತರದ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಬೇಕು. ಸ್ಥಳೀಯ ಆಡಳಿತದ ಅನುಮತಿಯೊಂದಿಗೆ ನಗರ ಪ್ರದೇಶಗಳಲ್ಲಿ ವಾರ್ಡ್ಗೆ ೧ರಂತೆ ಗಣಪತಿ ಪ್ರತಿಷ್ಠಾಪನೆ ಮಾಡಬಹುದು. ಗ್ರಾಮಾಂತರ ಪ್ರದೇಶಗಳಲ್ಲಿ ಅಲ್ಲಿನ ಆಡಳಿತದ ತೀರ್ಮಾನದಂತೆ ಆಚರಣೆ ಮಾಡಬೇಕು. ಪ್ರತಿಷ್ಠಾಪನಾ ಸ್ಥಳಗಳಲ್ಲಿ ೨೦ಕ್ಕಿಂತ ಹೆಚ್ಚು ಜನರು ಗುಂಪು ಸೇರದಂತೆ ಗಮನಹರಿಸಬೇಕು. ಗಣೇಶೋತ್ಸವ ಸಮಿತಿಯವರು ಕೋವಿಡ್ ನೆಗೆಟಿವ್ ವರದಿ ಹಾಗೂ ಲಸಿಕೆ ಪಡೆದಿರುವ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. ಗಣಪತಿ ಆರಾಧನಾ ಸ್ಥಳಗಳಲ್ಲಿ ಆಯೋಜಕರು ಲಸಿಕೆ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿ ಉಂಟುಮಾಡಬಾರದು.

ಯಾವುದೇ ಸಾಂಸ್ಕೃತಿಕ - ಮನರಂಜನಾ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ಡಿಜೆ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಗಣಪತಿ ಮೂರ್ತಿ ತರುವಾಗ ಹಾಗೂ ವಿಸರ್ಜಿಸುವಾಗ ಮೆರವಣಿಗೆ ನಡೆಸುವಂತಿಲ್ಲ. ಮನೆಗಳಲ್ಲಿ ಮೂರ್ತಿಗಳನ್ನು ಪ್ರತಿಷ್ಠಾಪಿಸುವವರು ಮನೆಯಲ್ಲಿಯೇ ವಿಸರ್ಜನೆ ಮಾಡಬೇಕು. ಸಾರ್ವಜನಿಕವಾಗಿ ಪ್ರತಿಷ್ಠಾಪಿಸುವವರು ಅತೀ ಕನಿಷ್ಟ ಜನಸಂಖ್ಯೆಯೊAದಿಗೆ ಸ್ಥಳೀಯ ಆಡಳಿತ ನಿಗದಿಪಡಿಸಿರುವ ಹೊಂಡ ಅಥವಾ ಕೆರೆಗಳಿಗೆ ಕೊಂಡೊಯ್ದು ವಿಸರ್ಜನೆ ಮಾಡಬಹುದು. ಪ್ರತಿಷ್ಠಾಪನಾ ಸ್ಥಳವನ್ನು ಪ್ರತಿನಿತ್ಯ ಸ್ಯಾನಿಟೈಸ್ ಮಾಡಬೇಕು. ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕಿçÃನಿಂಗ್ ವ್ಯವಸ್ಥೆಯನ್ನು ಕಲ್ಪಿಸಬೇಕು. ಭಕ್ತಾದಿಗಳು ಕನಿಷ್ಟ ೬ ಅಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸಮಿತಿಯವರು ಗಮನಹರಿಸಬೇಕು. ಮಾಸ್ಕ್ ಬಳಕೆ ಕಡ್ಡಾಯವಾಗಿದ್ದು, ಕೊರೊನಾ ನಿಯಮಗಳನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಕಂದಾಯ ಇಲಾಖೆಯ (ವಿ.ನಿ.) ಸರ್ಕಾರದ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು ಬಿಡುಗಡೆ ಮಾಡಿರುವ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.