ಸೋಮವಾರಪೇಟೆ, ಸೆ. ೫: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರತಿ ವರ್ಷ ನೀಡಲಾಗುತ್ತಿರುವ ವಾರ್ಷಿಕ ಪ್ರಶಸ್ತಿಗೆ ವರದಿಗಳನ್ನು ಆಹ್ವಾನಿಸಲಾಗಿದೆ.

ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಆರ್. ಹರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಇಲ್ಲಿನ ಪತ್ರಿಕಾಭವನದಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ, ತಾಲೂಕಿನ ಪತ್ರಕರ್ತರಿಂದ ವಾರ್ಷಿಕ ಪ್ರಶಸ್ತಿಗೆ ವರದಿಗಳನ್ನು ಆಹ್ವಾನಿಸಲು ತೀರ್ಮಾನಿಸಲಾಯಿತು.

ತಾಲೂಕು ಸಂಘದ ಮಾಜಿ ಅಧ್ಯಕ್ಷ ತೇಲಪಂಡ ಕವನ್ ಕಾರ್ಯಪ್ಪ ಅವರು ತಮ್ಮ ತಂದೆ-ತಾಯಿ ತೇಲಪಂಡ ಶಾರದಾ ಮತ್ತು ಸೋಮಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಮಾನವೀಯ ಮೌಲ್ಯವುಳ್ಳ ವರದಿ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಆರ್. ಹರೀಶ್ ಕುಮಾರ್ ತಮ್ಮ ತಂದೆ ಹೆಚ್.ಎಸ್. ರಾಮೇಗೌಡ ಹೆಸರಿನಲ್ಲಿ ಸ್ಥಾಪಿಸಿದ ಅತ್ಯುತ್ತಮ ಗ್ರಾಮೀಣ ವರದಿ ವಿಭಾಗಕ್ಕೆ ವರದಿಗಳನ್ನು ಆಹ್ವಾನಿಸಲಾಗಿದೆ.

ಇದರೊಂದಿಗೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಬಿ.ಎಸ್.ಲೋಕೇಶ್ ಸಾಗರ್ ತಮ್ಮ ತಂದೆ-ತಾಯಿ ಬಿ.ಕೆ. ಸುಬ್ಬಯ್ಯ - ಜಯಮ್ಮ ಹೆಸರಿನಲ್ಲಿ ಪ್ರಾರಂಭಿಸಿರುವ ಅರಣ್ಯ-ಪರಿಸರ ಮತ್ತು ವನ್ಯಜೀವಿ ವಿಭಾಗದ ವರದಿ, ಪತ್ರಕರ್ತರ ಸಂಘದ ರಾಷ್ಟಿçÃಯ ಮಂಡಳಿ ಸದಸ್ಯ ಎಸ್.ಎ. ಮುರುಳೀಧರ್ ತಮ್ಮ ತಂದೆ ಟಿ.ಪಿ. ಅಪ್ಪಸ್ವಾಮಿ ಹೆಸರಿನಲ್ಲಿ ಪ್ರಾರಂಭಿಸಿರುವ ಅತ್ಯುತ್ತಮ ಕ್ರೀಡಾವರದಿ ಹಾಗೂ ಕುಶಾಲನಗರದ ಪತ್ರಕರ್ತ ಎಂ.ಎನ್. ಚಂದ್ರಮೋಹನ್ ತಮ್ಮ ತಂದೆ ತಾಯಿ ಎಂ. ನಾರಾಯಣ ಮತ್ತು ಎಂ. ಪದ್ಮಾವತಿ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ತನಿಖಾ ವರದಿಗೆ ತಾಲೂಕಿನ ಪತ್ರಕರ್ತರುಗಳಿಂದ ವರದಿಗಳನ್ನು ಆಹ್ವಾನಿಸಲಾಗಿದೆ.

ಇದರೊಂದಿಗೆ ಕೂಗೂರಿನ ಯಶಸ್ವಿನಿ ಚಂದ್ರಕಾAತ್ ಅವರು, ತಮ್ಮ ತಂದೆ ಕೂಗೂರು ಗ್ರಾಮದ ತಿಮ್ಮಪ್ಪ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ದೃಶ್ಯ ಮಾಧ್ಯಮ ವರದಿ (ರಾಜಕೀಯ ಸುದ್ದಿ ಹೊರತುಪಡಿಸಿ) ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ತಾಲೂಕಿನ ಪತ್ರಕರ್ತರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿರಬೇಕು. ವರದಿಗಳು ೨೦೨೦ರ ಜನವರಿ ೧ ರಿಂದ ೨೦೨೦ರ ಡಿಸೆಂಬರ್ ೩೧ ರೊಳಗೆ ಪ್ರಕಟ ಗೊಂಡಿರಬೇಕು. ಅರ್ಜಿ ಸಲ್ಲಿಸುವವರು ತಾ. ೧೨ ರೊಳಗಾಗಿ ೨ ಭಾವಚಿತ್ರ ಸಹಿತ ೩ ಪ್ರತಿಗಳೊಂದಿಗೆ ಸೋಮವಾರ ಪೇಟೆಯ ಪತ್ರಿಕಾ ಭವನ ಕಚೇರಿಗೆ ತಲುಪಿಸಬೇಕು.

ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ತಾ. ೧೮ ರಂದು ಪೂರ್ವಾಹ್ನ ೧೦.೩೦ಕ್ಕೆ ಸ್ಥಳೀಯ ಸಫಾಲಿ ಸಭಾಂಗಣದಲ್ಲಿ ನಡೆಯಲಿದೆ.

ಅಂದೇ ಪ್ರಶಸ್ತಿ ವಿತರಣೆ, ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಸಂಘದ ಸದಸ್ಯರು ತಮ್ಮ ಮಕ್ಕಳ ಶೈಕ್ಷಣಿಕ ಮಾಹಿತಿಯನ್ನು ತಾ. ೧೨ ರೊಳಗೆ ಸಂಘದ ಪ್ರಧಾನ ಕಾರ್ಯದರ್ಶಿಗೆ ಸಲ್ಲಿಸಬೇಕೆಂದು ಅಧ್ಯಕ್ಷ ಹರೀಶ್ ಮಾಹಿತಿ ನೀಡಿದ್ದಾರೆ.