ಮಡಿಕೇರಿ, ಸೆ. ೫: ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (ಪಿ.ಎಂ.ಇ.ಜಿ.ಪಿ) ಕಾರ್ಯಕ್ರಮದಡಿ ಯಲ್ಲಿ ಕೈಗಾರಿಕೆ, ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

೧೮ ವರ್ಷ ತುಂಬಿದ ಪಟ್ಟಣ, ಗ್ರಾಮಾಂತರ ಪ್ರದೇಶದ ಅರ್ಹ ಅಭ್ಯರ್ಥಿಗಳು ತಿತಿತಿ.ಞviಛಿ.oಡಿg.iಟಿ (ಠಿmegಠಿ oಟಿಟiಟಿe ಚಿಠಿಠಿಟiಛಿಚಿಣioಟಿ) ನಲ್ಲಿ ಅರ್ಜಿಗಳನ್ನು ಅಳವಡಿಸಿ ಅದರ ೨ ಪ್ರತಿ ದಾಖಲಾತಿಗಳನ್ನು ಈ ಕಚೇರಿಗೆ ಸಲ್ಲಿಸುವುದು. ಅಪೂರ್ಣವಾಗಿ ಭರ್ತಿ ಮಾಡಿದ ಹಾಗೂ ದಾಖಲೆಗಳನ್ನು ನೀಡದೆ ಇರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ ಇವರ ಕಚೇರಿಯನ್ನು, ದೂ. ೦೮೨೭೨-೨೨೮೪೩೧/ ೨೨೮೭೪೬ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.