ಮಡಿಕೇರಿ, ಸೆ. ೭: ಜಿಲ್ಲಾ ಪಂಚಾಯಿತಿ, ಕೊಡಗು, ಪಶುಪಾಲನಾ ಇಲಾಖೆ, ನೆಹರು ಯುವ ಕೇಂದ್ರ, ಮಡಿಕೇರಿ, ತಾಲೂಕು ಯುವ ಒಕ್ಕೂಟ, ನೇತಾಜಿ ಯುವಕ ಹಾಗೂ ಯುವತಿ ಮಂಡಳಿ, ತಾಳತ್ತಮನೆ ಸಂಯುಕ್ತ ಆಶ್ರಯದಲ್ಲಿ ತಾಳತ್ತಮನೆಯ ಆಟದ ಮೈದಾನದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಉಚಿತ ರೇಬಿಸ್ ನಿರೋಧಕ ಲಸಿಕಾ ಶಿಬಿರ ಮತ್ತು ಮಾಹಿತಿ ಕಾರ್ಯಾಗಾರ ನಡೆಯಿತು.