ಮಡಿಕೇರಿ, ಸೆ. ೭: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಮತ್ತು ಮಡಿಕೇರಿ ಅರಣ್ಯ ಇಲಾಖೆ ವತಿಯಿಂದ ಇತ್ತೀಚೆಗೆ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಮಡಿಕೇರಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಗಿಡ ನೆಡುವ ಮೂಲಕ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿನರಾಳಕರ ಭೀಮರಾವ್ ಲಗಮಪ್ಪ ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಚಂದ್ರಶೇಖರ್ ಪಿ.ಎಸ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುಬ್ರಮಣ್ಯ ಎನ್, ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಕೆ.ಡಿ ದಯಾನಂದ, ಕಾರ್ಯದರ್ಶಿ ಅರುಣಾ ಕುಮಾರ, ಮಡಿಕೇರಿ ಉಪ ವಲಯ ಅರಣ್ಯಾಧಿಕಾರಿ ಬಾಬು ರಾಥೋಡ್, ಮಡಿಕೇರಿ ವಿಭಾಗದ ಅರಣ್ಯ ಇಲಾಖೆ ಸಿಬ್ಬಂದಿಗಳಾದ ವಾಸುದೇವ್, ಶರತ್, ನಿಖಿಲ್, ತಿಮ್ಮಯ್ಯ, ಕುಶ ಹಾಗೂ ಇತರರು ಹಾಜರಿದ್ದರು.