ಸುಂಟಿಕೊಪ್ಪ, ಸೆ. ೭: ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಕೊಡಗು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಶ್ರಯದಲ್ಲಿ ಪೋಷಣ್ ಅಭಿಯಾನದ ಜನಾಂದೋಲನ ಸಪ್ತಾಹ ನಡೆಯಿತು. ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅಣ್ಣಯ್ಯ ಅವರು ಪಾಲ್ಗೊಂಡು ಮಾತನಾಡಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಹೆಚ್. ವೇಣು ಗೋಪಾಲ್ ಮಾತನಾಡಿ, ಅಪೌಷ್ಟಿಕತೆಯಿಂದ ಕೂಡಿರುವವರು ವೈದ್ಯರ ಸಲಹೆ ಮೇರೆಗೆ ಸೂಕ್ತ ಚಿಕಿತ್ಸೆ ಪಡೆದು ಪೌಷ್ಟಿಕ ಆಹಾರ ಸೇವಿಸಬೇಕೆಂದರು.

ಅತಿಥಿಗಳು ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪಂಚಾಯಿತಿ ಉಪಾಧ್ಯಕ್ಷ ಪ್ರಸಾದ್ ಕುಟ್ಟಪ್ಪ, ಅಂಗನವಾಡಿ ಕಾರ್ಯಕರ್ತೆ ಜೆಸ್ಸಿ ಡಿಸೋಜಾ ಮತ್ತು ಪಾರ್ವತಿ ಮಾತನಾಡಿದರು.

ವೇದಿಕೆಯಲ್ಲಿ ಜಿಲ್ಲಾ ವಿಶೇಷಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಾಯಕ ಅಧಿಕಾರಿ ವಿಮಲ, ಮಾತೃವಂದನ ಜಿಲ್ಲಾ ಸಂಯೋಜಕ ನಯನ, ಪೋಷಣ್ ಅಭಿಯಾನದ ಜಿಲ್ಲಾ ಸಂಯೋಜಕ ನಿತಿನ್, ಕಾರ್ಯಕ್ರಮ ಸಹಾಯಕರಾದ ಕಾವ್ಯ, ವೇಣು, ತಾಲೂಕು ಸಂಯೋಜಕರಾದ ಅನ್ಸನ್ ಮತ್ತು ಕೆ.ಎನ್. ರಂಜಿತಾ, ಪಂಚಾಯಿತಿ ಸದಸ್ಯರು, ಸಿಬ್ಬಂದಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು ಮತ್ತಿತರರು ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆ ಜಯಂತಿ ಪ್ರಾರ್ಥಿಸಿ, ಪಂಚಾಯಿತಿ ಸಿಬ್ಬಂದಿ ಪುನೀತ್ ಕುಮಾರ್ ಸ್ವಾಗತಿಸಿ, ವಂದಿಸಿದರು.

ಪಂಚಾಯಿತಿ ಕಚೇರಿ ಮುಂಭಾಗ ದಿಂದ ಉಲುಗುಲಿ ರಸ್ತೆ ಮಾರ್ಗವಾಗಿ ಡಾ. ಅಂಬೇಡ್ಕರ್ ಭವನದವರೆಗೆ ಜಾಗೃತಿ ಜಾಥಾ ನಡೆಯಿತು.