ಕೂಡಿಗೆ, ಸೆ. ೮: ಕೂಡಿಗೆ ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವೇಶನ ರಹಿತರಿಗೆ ನಿವೇಶನ ನೀಡಲು ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಅವರ ಸೂಚನೆಯಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಈಗಾಗಲೇ ನಿವೇಶನ ರಹಿತರ ಪಟ್ಟಿ ಸಿದ್ಧವಾಗಿ ನಿವೇಶನಕ್ಕೆ ಜಾಗ ನೀಡಲು ಸಕಲ ಸಿದ್ಧತೆಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಕೂಡಿಗೆ ಗ್ರಾ.ಪಂ. ವ್ಯಾಪ್ತಿಯ ಬ್ಯಾಡಗೊಟ್ಟ ಮತ್ತು ಕೂಡು ಮಂಗಳೂರು ವ್ಯಾಪ್ತಿಯ ಬೆಂಡೆಬೆಟ್ಟ ಗ್ರಾಮದಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನಕ್ಕೆ ಜಾಗವನ್ನು ನೀಡ ಲಾಗುವುದು ಎಂದು ಶಾಸಕ ಅಪ್ಪಚ್ಚು ರಂಜನ್ ತಿಳಿಸಿದ್ದಾರೆ. ಎರಡು ತಿಂಗಳುಗಳ ಹಿಂದೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ತಾಲೂಕು ಮಟ್ಟದ ಎಲ್ಲಾ ಗ್ರಾಮ ಪಂಚಾಯಿತಿ ಗಳಿಗೆ ಭೇಟಿ ನೀಡಿದ ಸಂದರ್ಭ ನಿವೇಶನ ರಹಿತರು ಶಾಸಕರನ್ನು ಭೇಟಿ ಮಾಡಿ ತಮ್ಮ ಅಹವಾಲುಗಳನ್ನು ನೀಡಿದ್ದರು. ಅದರ ಮೂಲಕ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಂದಾಯ ಇಲಾಖೆಗೆ ಸೇರಿದ ಜಾಗವನ್ನು ಗುರುತಿಸಿ ನಿವೇಶನಕ್ಕಾಗಿ ಕಾಯ್ದಿರಿಸಲು ಅಧಿಕಾರಿ ಗಳಿಗೆ ಸೂಚನೆ ನೀಡಿದ್ದರು. ಅದರಂತೆ ಕೂಡಿಗೆ ಮತ್ತು ಕೂಡುಮಂಗಳೂರು ಲಾಗುವುದು ಎಂದು ಶಾಸಕ ಅಪ್ಪಚ್ಚು ರಂಜನ್ ತಿಳಿಸಿದ್ದಾರೆ. ಎರಡು ತಿಂಗಳುಗಳ ಹಿಂದೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ತಾಲೂಕು ಮಟ್ಟದ ಎಲ್ಲಾ ಗ್ರಾಮ ಪಂಚಾಯಿತಿ ಗಳಿಗೆ ಭೇಟಿ ನೀಡಿದ ಸಂದರ್ಭ ನಿವೇಶನ ರಹಿತರು ಶಾಸಕರನ್ನು ಭೇಟಿ ಮಾಡಿ ತಮ್ಮ ಅಹವಾಲುಗಳನ್ನು ನೀಡಿದ್ದರು. ಅದರ ಮೂಲಕ ಗ್ರಾ.ಪಂ. ವ್ಯಾಪ್ತಿಯಲ್ಲಿ ಕಂದಾಯ ಇಲಾಖೆಗೆ ಸೇರಿದ ಜಾಗವನ್ನು ಗುರುತಿಸಿ ನಿವೇಶನಕ್ಕಾಗಿ ಕಾಯ್ದಿರಿಸಲು ಅಧಿಕಾರಿ ಗಳಿಗೆ ಸೂಚನೆ ನೀಡಿದ್ದರು. ಅದರಂತೆ ಕೂಡಿಗೆ ಮತ್ತು ಕೂಡುಮಂಗಳೂರು ೩೬ ಜನರಿಗೆ ನೀಡಲು ಸಕಲ ಸಿದ್ಧತೆ ಗಳು ನಡೆಯುತ್ತಿವೆ. ಈಗಾಗಲೇ ಗುರುತಿಸಲ್ಪಟಿರುವ ಫಲಾನುಭವಿಗಳು ಗ್ರಾಮ ಸಭೆಯಲ್ಲಿ ಮನವಿಯನ್ನು ಸಲ್ಲಿಸಿದ್ದು, ಫಲಾನುಭವಿಗಳ ಪರಿಶೀಲನೆ ನಡೆಸಿ ಅಂತಿಮ ಪಟ್ಟಿಯನ್ನು ತಯಾರಿಸಿ ತಾ. ಪಂ.ಗೆ ಆಡಳಿತಾತ್ಮಕ ಪರಿಶೀಲನೆಗೆ ಕಡತವನ್ನು ವಿಲೇವಾರಿ ಮಾಡ ಲಾಗಿದೆ.

ಮುಂದಿನ ದಿನಗಳಲ್ಲಿ ನಿವೇಶನ ರಹಿತರಿಗೆ ನಿವೇಶನದ ಜಾಗವನ್ನು ನೀಡಲಾಗುವುದು ಎಂದು ಕೂಡಿಗೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಆಯಿಷಾ ತಿಳಿಸಿದ್ದಾರೆ.