ಮಡಿಕೇರಿ, ಸೆ.೮: ಕೊಡಗು ಜಿಲ್ಲಾ ಸರ್ವೋದಯ ಸಮಿತಿ ವತಿಯಿಂದ ಮಹಾತ್ಮ ಗಾಂಧೀಜಿಯ ೧೫೩ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಸಲುವಾಗಿ ಅ.೨ ರಂದು ೮ನೇ ತರಗತಿಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗಾಗಿ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆ ಏರ್ಪಡಿಸಲಾಗಿದೆ. ನಗರದ ಗಾಂಧಿ ಮೈದಾನದಲ್ಲಿ ಬೆಳಿಗ್ಗೆ ೯ ಗಂಟೆಗೆ ಗಾಂಧಿ ಪ್ರತಿಮೆಗೆ ಗೌರವಾರ್ಪಣೆ ಸಲ್ಲಿಸಿದ ನಂತರ ಸ್ಪರ್ಧಾ ಕಾರ್ಯಕ್ರಮ ನಡೆಯಲಿದ್ದು, ಆಸಕ್ತರು ತಾ. ೨೫ರ ಒಳಗಾಗಿ ಅಂಬೆಕಲ್ ನವೀನ್ : ೯೪೪೮೦೦೫೬೪೨, ಎಂ.ಎA.ಲಿಯಾಖತ್ ಆಲಿ:೯೪೪೮೪೨೨೫೦೫ ಇವರುಗಳ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ತಮ್ಮ ಹೆಸರು ನೋಂದಾಯಿಸಿಕೊಳ್ಳುವAತೆ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್.ಐ ಮುನೀರ್ ಅಹಮ್ಮದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.