ಮಡಿಕೇರಿ, ಸೆ. ೭: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪೊನ್ನಚನ ಶ್ರೀನಿವಾಸ್, ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಸಿ. ಅರುಣ್ ಕುಮಾರ್, ಪದಾಧಿಕಾರಿಗಳು ಮತ್ತು ನಿರ್ದೇಶಕರುಗಳು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರನ್ನು ಭೇಟಿಯಾಗಿ ಸರ್ಕಾರಿ ನೌಕರರ ಕುಂದು ಕೊರತೆ ಸಭೆ ಆಯೋಜಿಸುವಂತೆ ಹಾಗೂ ಇತರ ವಿಷಯಗಳ ಬಗ್ಗೆ ಮನವಿ ಸಲ್ಲಿಸಿದರು.