ಮಡಿಕೇರಿ, ಸೆ. ೮: ಜಿಲ್ಲೆಯಲ್ಲಿ ಬುಧವಾರ ೩೨ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ ೧೪, ಸೋಮವಾರಪೇಟೆ ತಾಲೂಕಿನಲ್ಲಿ ೮, ವೀರಾಜಪೇಟೆ ತಾಲೂಕಿನಲ್ಲಿ ೧೦ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೪,೦೫೪ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೪೭ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೩,೧೫೬ ಮಂದಿ ಗುಣಮುಖರಾಗಿದ್ದಾರೆ. ೪೮೨ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ, ಇದುವರೆಗೆ ಒಟ್ಟು ೪೧೬ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೭೦ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. ೦.೭ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.