ಮಡಿಕೇರಿ, ಸೆ. ೭: ವೀರಾಜಪೇಟೆ ತಾಲೂಕು ಪೊನ್ನಂಪೇಟೆ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ೨೦೨೧-೨೨ನೇ ಸಾಲಿಗೆ ಉದ್ಯೋಗಿನಿ ಯೋಜನೆಯಡಿ ೭ ಗುರಿ ನಿಗದಿಪಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಯಸ್ಸು ೧೮ ರಿಂದ ೫೫ ವರ್ಷದೊಳಗಿರಬೇಕು. ವಾರ್ಷಿಕ ಆದಾಯ ರೂ.೧,೫೦,೦೦೦ ಮೀರಿರಬಾರದು. ಅರ್ಜಿ ಸಲ್ಲಿಸಲು ತಾ. ೩೦ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನೆ, ಪೊನ್ನಂಪೇಟೆ ಕಚೇರಿ ದೂ.ಸಂ. ೦೮೨೭೪-೨೪೯೦೧೦ ನ್ನು ಸಂಪರ್ಕಿಸಬಹುದು. ಹಾಗೂ ಕಚೇರಿ ವೇಳೆಯಲ್ಲಿ ಅರ್ಜಿ ಪಡೆಯಬಹುದು ಎಂದು ಪೊನ್ನಂಪೇಟೆ ತಾಲ್ಲೂಕು ಸಮಗ್ರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ.