ಬ್ರಹ್ಮಪುತ್ರ ನದಿಯಲ್ಲಿ ದೋಣಿಗಳ ಡಿಕ್ಕಿ, ಹಲವು ಮಂದಿ ಜಲಸಮಾಧಿ ಶಂಕೆ
ಜೊರ್ಹಾತ್, ಸೆ. ೮: ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಯಲ್ಲಿ ದೋಣಿ ಫೆರ್ರಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ದೋಣಿಗಳು ಮುಳುಗಿ ಹಲವು ಮಂದಿ ಜಲಸಮಾಧಿಯಾಗಿರುವ ಶಂಕೆ ಇದೆ. ಜೊರ್ಹಾತ್ ಜಿಲ್ಲೆಯ ನಿಮಾತಿ ಘಾಟ್‌ನಲ್ಲಿ ಈ ಘಟನೆ ವರದಿಯಾಗಿದ್ದು, ಮಾ ಕಮಲ ದೋಣಿ ನಿಮಾತಿ ಘಾಟ್‌ನಿಂದ ಮಜುಲಿಗೆ ಸಂಚರಿಸುತ್ತಿದ್ದಾಗ ಮಜುಲಿಯಿಂದ ವಾಪಸ್ಸಾಗುತ್ತಿದ್ದ ಸರ್ಕಾರಿ ಸ್ವಾಮ್ಯದ ಟ್ರಿಪೈಗೆ ಡಿಕ್ಕಿ ಹೊಡೆದಿದೆ. ಪರಿಣಾಮ ದೋಣಿ ಮುಳುಗಿದೆ ಎಂದು ಐಡಬ್ಲ್ಯುಟಿ ಇಲಾಖೆಯ ಅಧಿಕಾರಿ ಮಾಹಿತಿ ನೀಡಿದ್ದಾರೆ. ಮತ್ತೋರ್ವ ಅಧಿಕಾರಿಯ ಪ್ರಕಾರ ದೋಣಿಯಲ್ಲಿ ೧೨೦ ಪ್ರಯಾಣಿಕರಿದ್ದರು. ಆದರೆ ತ್ರಿಪೈನಿಂದಲೇ ಹಲವರನ್ನು ರಕ್ಷಿಸಲಾಗಿದೆ ಎಂದು ಹೇಳಿದ್ದಾರೆ. ಈ ದುರ್ಘಟನೆಯಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಘಟನಾ ಸ್ಥಳಕ್ಕೆ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಧಾವಿಸಿದ್ದು ಶೋಧ ಕಾರ್ಯಾಚರಣೆ ಪ್ರಾರಂಭಿಸಿವೆ. ಬೋಟ್‌ನಲ್ಲಿ ದ್ವಿಚಕ್ರ ವಾಹನಗಳು ಹಾಗೂ ನಾಲ್ಕು ಚಕ್ರದ ವಾಹನಗಳನ್ನು ಸಾಗಿಸಲಾಗುತ್ತಿತ್ತು ಎಂಬ ಮಾಹಿತಿಯೂ ಲಭ್ಯವಾಗಿದೆ.
ಅಂತರ್ಜಾಲ ಸಂಪರ್ಕ ವ್ಯವಸ್ಥೆ ಸುಧಾರಣೆಗೆ ಕೇಂದ್ರ ಸರ್ಕಾರದಿಂದ ಕಾರ್ಯಪಡೆ ರಚನೆ
ನವದೆಹಲಿ, ಸೆ. ೮: ಕರ್ನಾಟಕದಲ್ಲಿ ಅಂತರ್ಜಾಲ ಸಂಪರ್ಕ ವ್ಯವಸ್ಥೆ ಸುಧಾರಣೆಗೆ ಸಂಬAಧಿಸಿದAತೆ ಕಾರ್ಯಪಡೆಯೊಂದನ್ನು ಕೇಂದ್ರ ಸರ್ಕಾರ ರಚಿಸಿದೆ ಎಂದು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ. ಈ ಕುರಿತಂತೆ ಪ್ರಕಟಣೆ ನೀಡಿರುವ ಸಚಿವಾಲಯ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಿರ್ದೇಶನದಂತೆ ಎಲೆಕ್ಟಾçನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ರಾಜ್ಯ ಸಚಿವರಾದ ರಾಜೀವ್ ಚಂದ್ರಶೇಖರ್ ಅವರು ಕರ್ನಾಟಕದಲ್ಲಿ ಇತ್ತೀಚೆಗೆ ನಡೆಸಿದ ೬ ಜಿಲ್ಲೆಗಳ ಜನಾಶೀರ್ವಾದ ಯಾತ್ರೆಯಲ್ಲಿ, ಇಂಟರ್‌ನೆಟ್ ಸಂಪರ್ಕದ ವೇಗ ಮತ್ತು ಪ್ರವೇಶವನ್ನು ಸುಧಾರಿಸಲು ಹಲವಾರು ವಿನಂತಿಗಳು ಬಂದಿದ್ದವು. ಪ್ರತಿ ಜಿಲ್ಲೆಯ ಕೆಲವು ಭಾಗಗಳು. ಪ್ರತಿ ಜಿಲ್ಲೆಯಲ್ಲಿಯೂ ಇದನ್ನು ಅಧ್ಯಯನ ಮಾಡಲು ಮೈಟಿ ಟಾಸ್ಕ್ಫೋರ್ಸ್ ಕಳುಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದರು. ಸಚಿವರು ನೀಡಿದ್ದ ಭರವಸೆಯಂತೆ ನ್ಯಾಷನಲ್ ಇಂಟರ್‌ನೆಟ್ ಎಕ್ಸ್ಚೇಂಜ್ ಆಫ್ ಇಂಡಿಯಾ (ಎನ್‌ಐಎಕ್ಸ್ಐ) ಮತ್ತು ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ ಆಫ್ ಇಂಡಿಯಾ (ಎಸ್‌ಟಿಪಿಐ) ಪ್ರತಿನಿಧಿಗಳನ್ನು ಒಳಗೊಂಡ ಕಾರ್ಯಪಡೆಯನ್ನು ರಚನೆ ಮಾಡಲಾಗಿದೆ. ಕಾರ್ಯಪಡೆಯ ಸದಸ್ಯರು ಪ್ರತಿ ಜಿಲ್ಲೆಗೂ ಭೇಟಿ ನೀಡಿ ಜನರ ಸಮಸ್ಯೆ ಆಲಿಸಲಿದ್ದಾರೆ. ಅವರು ರಾಜ್ಯ ಸರ್ಕಾರಿ ಅಧಿಕಾರಿಗಳನ್ನೂ ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ ಮತ್ತು ಸಚಿವರಿಗೆ ವರದಿಯನ್ನು ಸಲ್ಲಿಸಲಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. ಅಂತೆಯೇ ಈ ಬದ್ಧತೆಗೆ ಪ್ರತಿಕ್ರಿಯೆಯಾಗಿ, ನ್ಯಾಷನಲ್ ಇಂಟರ್‌ನೆಟ್ ಎಕ್ಸ್ಚೇಂಜ್ ಆಫ್ ಇಂಡಿಯಾ ಮತ್ತು ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ ಅಧಿಕಾರಿಗಳನ್ನು ಒಳಗೊಂಡ ಕಾರ್ಯಪಡೆಯು ತಮ್ಮ ಭೇಟಿ ಮತ್ತು ಕೆಲಸವನ್ನು ತ್ವರಿತವಾಗಿ ಆರಂಭಿಸಿದೆ. ಅವರು ಪ್ರತಿ ಜಿಲ್ಲೆಗೆ ಭೇಟಿ ನೀಡಿ ಜನರನ್ನು ಭೇಟಿ ಮಾಡಿ ಚರ್ಚಿಸುತ್ತಾರೆ.
ಡ್ರಗ್ಸ್ ಪ್ರಕರಣದ ಚಾರ್ಜ್ಶೀಟ್‌ನಲ್ಲಿ ಅನುಶ್ರೀ ಹೆಸರಿಲ್ಲ
ಮಂಗಳೂರು, ಸೆ. ೮: ಚಾರ್ಜ್ಶೀಟ್‌ನಲ್ಲಿ ಅನುಶ್ರೀ ಹೆಸರು ಉಲ್ಲೇಖವಾಗಿಲ್ಲ. ಆದರೆ, ಕಿಶೋರ್ ಅಮನ್ ಹೇಳಿಕೆಯಲ್ಲಷ್ಟೇ ಅನುಶ್ರೀ ಹೆಸರಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾರ್ಜ್ಶೀಟ್‌ನಲ್ಲಿ ಆರೋಪಗಳಿದ್ದರೆ ವಕೀಲರ ಮೂಲಕ ಕೋರ್ಟ್ಗೆ ತಿಳಿಸಬಹುದು. ಆದರೆ, ಚಾರ್ಜ್ಶೀಟ್‌ನಲ್ಲಿ ಅನುಶ್ರೀ ಹೆಸರು ಉಲ್ಲೇಖವಾಗಿಲ್ಲ. ಕಿಶೋರ್ ಹೇಳಿಕೆಯಲ್ಲಷ್ಟೇ ಅನುಶ್ರೀ ಹೆಸರಿದೆ. ಕಿಶೋರ್‌ನನ್ನು ಮತ್ತೆ ಕರೆದು ವಿಚಾರಣೆ ನಡೆಸುವ ಅಗತ್ಯವಿಲ್ಲ. ಪ್ರಕರಣದ ಸಂಪೂರ್ಣ ತನಿಖೆ ಮಾಡಿ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದೇವೆ ಎಂದರು. ನಾನು ಮಂಗಳೂರು ಆಯುಕ್ತನಾಗಿ ಅಧಿಕಾರ ಸ್ವೀಕರಿಸಿ ೮ ತಿಂಗಳಾಗಿದೆ ಅಷ್ಟೇ. ೯ ತಿಂಗಳ ಹಿಂದೆಯೇ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಈಗ ಏಕೆ ಈ ವಿಚಾರ ಸುದ್ದಿಯಾಯಿತು ಗೊತ್ತಿಲ್ಲ. ಅನುಶ್ರೀ ಮೇಲೆ ಬಂದ ಆರೋಪಕ್ಕೆ ಪೂರಕ ಸಾಕ್ಷಿಗಳು ಲಭ್ಯವಾಗಿಲ್ಲ ಎಂದರು. ೬ ಆರೋಪಿಗಳ ಮೇಲೆ ಅಂತಿಮ ವರದಿ ಸಲ್ಲಿಸಿದ್ದೇವೆ. ಇದರಲ್ಲಿ ಐದು ಆರೋಪಿಗಳಿಗೆ ಜಾಮೀನು ಲಭಿಸಿದೆ. ಓರ್ವ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ.