ಮಡಿಕೇರಿ, ಸೆ. ೭: ಗಡಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಶೇ.೧೦೦ ರಷ್ಟು ಕೋವಿಡ್ ಮೊದಲ ಡೋಸ್ ಲಸಿಕೆ ನೀಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿಗಳೊಂದಿಗೆ ನಡೆದ ವೀಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ಮಡಿಕೇರಿ, ಸೆ. ೭: ಗಡಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಶೇ.೧೦೦ ರಷ್ಟು ಕೋವಿಡ್ ಮೊದಲ ಡೋಸ್ ಲಸಿಕೆ ನೀಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿಗಳೊಂದಿಗೆ ನಡೆದ ವೀಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ಕಿ.ಮೀ ವ್ಯಾಪ್ತಿಯಲ್ಲಿ ಬರುವ ಸುಮಾರು ೩೦ ಹಳ್ಳಿಗಳಲ್ಲಿ ೩೯ ಸಾವಿರ ಜನರಿಗೆ ಸ್ವಯಂ ಪ್ರೇರಿತವಾಗಿ ವ್ಯಾಕ್ಸಿನ್ ನೀಡಲಾಗುತ್ತಿದೆ.
ಜಿಲ್ಲೆಯಲ್ಲಿ ಇದುವರೆಗೆ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಮೊದಲ ಹಂತದ ಲಸಿಕೆಯನ್ನು ಶೇ. ೮೨ ರಷ್ಟು ಪೂರ್ಣಗೊಳಿಸಲಾಗಿದ್ದು, ಮುಂದಿನ ಎರಡು ವಾರಗಳಲ್ಲಿ ಶೇ.೧೦೦ ರಷ್ಟು ಸಾಧನೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸಚಿವರಿಗೆ ಮಾಹಿತಿ ನೀಡಿದರು.
ಕೊಡಗು ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಕರಣಗಳು ಶೇ.೧.೯೭ ಇದೆ. ಅದರ ಬಗ್ಗೆ ಶೀಘ್ರ ಕ್ರಮ ಕೈಗೊಂಡು ರ್ಯಾಟ್ ಪರೀಕ್ಷೆಯನ್ನು ಹೆಚ್ಚಿಸಲಾಗುವುದು ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೇರಳ ರಾಜ್ಯಕ್ಕೆ ಹೊಂದಿಕೊAಡಿರುವ ಗಡಿ ಜಿಲ್ಲೆಗಳಲ್ಲಿ ಪೂರ್ಣ ಪ್ರಮಾಣದ ಲಸಿಕೆ ಗುರಿಯನ್ನು ಹೊಂದಲಾಗಿದೆ. ಅದರಂತೆಯೇ ಹೆಚ್ಚು ಹೆಚ್ಚು ಪ್ರಕರಣಗಳು ದಾಖಲಾಗುತ್ತಿರುವ ಪ್ರದೇಶಗಳನ್ನು ಕಂಟೈನ್ಮೆAಟ್ ವಲಯಗಳನ್ನಾಗಿ ಪರಿವರ್ತಿಸಲು ಸೂಚಿಸಲಾಗಿದೆ ಮತ್ತು ಮುನ್ನೆಚ್ಚರಿಕಾ ಕ್ರಮವಾಗಿ ಪ್ರಾಥಮಿಕ ಸಂಪರ್ಕ ಸೋಂಕಿತರ ಮೇಲೆ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಸಚಿವರ ಗಮನಕ್ಕೆ ತಂದರು.
ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಡಿಹೆಚ್ಒ ಡಾ. ವೆಂಕಟೇಶ್, ಡಾ. ಗೋಪಿನಾಥ್, ಡಾ. ಆನಂದ್, ಇತರರು ಇದ್ದರು.