ಸೋಮವಾರಪೇಟೆ,ಸೆ.೭: ಸೋಮವಾರಪೇಟೆ ವ್ಯಾಪ್ತಿಯಲ್ಲಿ ನಡೆಯುವ ಗಣೇಶೋತ್ಸವಕ್ಕೆ ಸಂಬAಧಿಸಿದAತೆ ತಾ. ೮ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ಕಂದಾಯ ಇಲಾಖೆ ವತಿಯಿಂದ ಪಟ್ಟಣದ ಜಾನಕಿ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿದೆ. ಸೋಮವಾರಪೇಟೆ ವ್ಯಾಪ್ತಿಯ ವಿವಿಧೆಡೆ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಸಮಿತಿಗಳ ಪದಾಧಿಕಾರಿಗಳನ್ನು ಒಳಗೊಂಡAತೆ ಇಲಾಖಾಧಿಕಾರಿಗಳ ಸಭೆ ಆಯೋಜಿಸಿದ್ದು, ಉತ್ಸವ ಮೂರ್ತಿಗಳ ಪ್ರತಿಷ್ಟಾಪನೆಗೆ ಸಂಬAಧಿಸಿದAತೆ ಚರ್ಚೆ, ಸೂಚನೆ, ಮಾರ್ಗದರ್ಶನ ನೀಡಲಾಗುವುದೆಂದು ತಾಲೂಕು ತಹಶೀಲ್ದಾರ್ ಗೋವಿಂದರಾಜು ತಿಳಿಸಿದ್ದಾರೆ.