ಮಡಿಕೇರಿ, ಸೆ.೭: ಇತ್ತೀಚೆಗೆ ಟೋಕಿಯೋದಲ್ಲಿ ನಡೆದ ಒಲಂಪಿಕ್ಸ್ನಲ್ಲಿ ಭಾರತದ ಮಹಿಳೆಯರ ಹಾಕಿ ತಂಡದ ಸಹಾಯಕ ಹಾಕಿ ತರಬೇತುದಾರರಾಗಿ ಕಾರ್ಯ ನಿರ್ವಹಿಸಿದ ಬಿ.ಎಸ್.ಅಂಕಿತಾ ಸುರೇಶ್ ಅವರಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆತ್ಮೀಯವಾಗಿ ಗೌರವಿಸಲಾಯಿತು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಅಭಿನಂದನಾ ಸಮಾರಂಭದಲ್ಲಿ ಅಂಕಿತಾ ಸುರೇಶ್ ಅವರಿಗೆ ಶಾಲು, ಪೇಟ, ಪುಸ್ತಕ, ಪ್ರಶಸ್ತಿ ಪತ್ರ ಮತ್ತಿತರವನ್ನು ನೀಡಿ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಅಂಕಿತಾ ಸುರೇಶ್ ಅವರು ಹಿರಿಯರ ಮಾರ್ಗದರ್ಶನ, ವ್ಯಾಸಂಗ ಮಾಡುವ ಸಂದರ್ಭದಲ್ಲಿ ಹಾಕಿ ತರಬೇತು ದಾರರು, ಶಿಕ್ಷಕರು, ಕುಟುಂಬದವರು ಹೀಗೆ ಎಲ್ಲರ ಸಹಕಾರ ಮತ್ತು ಪ್ರೋತ್ಸಾಹದಿಂದ ಹಾಕಿ ಕ್ರೀಡಾ ತಂಡದ ಸಹಾಯಕ ತರಬೇತು ದಾರರಾಗುವ ಹಂತಕ್ಕೆ ತಲುಪಲು ಸಾಧ್ಯವಾಯಿತು ಎಂದು ಸ್ಮರಿಸಿದರು.

ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭಾವಂತ ಕ್ರೀಡಾಪಟುಗಳು ಇದ್ದು, ಕ್ರೀಡಾಪಟುಗಳಿಗೆ ಅಗತ್ಯ ಸಹಕಾರ ಮತ್ತು ಪ್ರೋತ್ಸಾಹ ನೀಡಿದ್ದಲ್ಲಿ ರಾಷ್ಟç ಮತ್ತು ಅಂರ‍್ರಾಷ್ಟಿçÃಯ ಮಟ್ಟದ ಕ್ರೀಡಾಕೂಟಗಳಲ್ಲಿ ಪಾಲ್ಗೊಂಡು, ಜಿಲ್ಲೆ, ರಾಜ್ಯ ಹಾಗೂ ರಾಷ್ಟçಕ್ಕೆ ಕೀರ್ತಿ ತರಲಿದ್ದಾರೆ ಎಂದು ಅಂಕಿತಾ ಸುರೇಶ್ ಹೇಳಿದರು. ಅಂಕಿತಾ ಅವರನ್ನು ಸನ್ಮಾನಿಸಿ ಮಾತನಾಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಯಾವುದೇ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವಲ್ಲಿ ಮತ್ತು ಆತ್ಮವಿಶ್ವಾಸ ತುಂಬುವಲ್ಲಿ ಕ್ರೀಡಾ ತರಬೇತುದಾರರ ಪಾತ್ರ ಅತಿ ಅಮೂಲ್ಯವಾಗಿದೆ;

ಅಂಕಿತಾ ಸುರೇಶ್ ಅವರು ಚಿಕ್ಕ ವಯಸ್ಸಿನಲ್ಲಿಯೇ ಅಂರ‍್ರಾಷ್ಟಿçÃಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲೆ, ರಾಜ್ಯ ಮತ್ತು ರಾಷ್ಟçಕ್ಕೆ ಹೆಸರು ತಂದಿದ್ದಾರೆ ಎಂದು ಶ್ಲಾಘಿಸಿದರು. ಜಿಲ್ಲೆಯ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವಲ್ಲಿ ಜಿಲ್ಲಾಡಳಿತ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಮಾತನಾಡಿ ಅಂಕಿತಾ ಸುರೇಶ್ ಅವರು ಭಾರತ ಮಹಿಳಾ ಹಾಕಿ ತಂಡದ ಸಹಾಯಕ ತರಬೇತುದಾರ ರಾಗಿ ಕರ್ತವ್ಯ ನಿರ್ವಹಿಸಿ, ಟೋಕಿಯೋ ಒಲಂಪಿಕ್ಸ್ ಮಹಿಳಾ ಹಾಕಿ ತಂಡವು ಉತ್ತಮ ಸಾಧನೆ ಮಾಡಿದ್ದು ಮರೆಯುವಂತಿಲ್ಲ ಎಂದರು. ಕೂಡಿಗೆ ಕ್ರೀಡಾ ಶಾಲೆಯ ಅಥ್ಲೇಟಿಕ್ ತರಬೇತುದಾರ ಆಂಥೋನಿ ಡಿಸೋಜಾ ಅವರು ಅಂಕಿತಾ ಸುರೇಶ್ ಅವರ ಕುರಿತು ಕಿರು ಪರಿಚಯ ಮಾಡಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಿ.ಎಸ್.ಗುರುಸ್ವಾಮಿ ಸ್ವಾಗತಿಸಿದರು, ಕೂಡಿಗೆ ಕ್ರೀಡಾ ಶಾಲೆಯ ಪ್ರಾಂಶುಪಾಲರಾದ ದೇವಕುಮಾರ್ ನಿರೂಪಿಸಿ, ಮುರುಳಿ ವಂದಿಸಿದರು.