ಕೂಡಿಗೆ, ಸೆ. ೭: ಗ್ರಾಮಾಂತರ ಪ್ರದೇಶಗಳಲ್ಲಿ ನಡೆಯುವ ಅಪರಾಧ ಗಳನ್ನು ತಡೆಗಟ್ಟಲು ಗ್ರಾಮಸ್ಥರ ಸಹಕಾರ ಮುಖ್ಯ. ಸಾರ್ವಜನಿಕರು ಪೊಲೀಸರಿಗೆ ಮಾಹಿತಿಯನ್ನು ನೀಡುವ ಮೂಲಕ ಸಹಕರಿಸಬೇಕು ಎಂದು ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಶಿವಶಂಕರ್ ಹೇಳಿದರು. ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯದ ಕಲ್ಯಾಣ ಮಂಟಪ ಸಭಾಂಗಣದಲ್ಲಿ ನಡೆದ ಪೊಲೀಸ್ ಗಸ್ತು ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿ ದರು. ಗ್ರಾಮದ ಮುಖ್ಯ ಬೀದಿಗಳಲ್ಲಿ ಮತ್ತು ದೇವಾಲಯಗಳ ಸ್ಥಳದಲ್ಲಿ ಸಿಸಿಟಿವಿ ಅಳವಡಿಕೆ ಮಾಡುವುದರಿಂದ ಅಪರಾಧಿಗಳನ್ನು ಪತ್ತೆ ಹಚ್ಚಲು ಸಹಾಯವಾಗುತ್ತದೆ ಎಂದು ಶಿವಶಂಕರ್ ನುಡಿದರು.

ಸಭೆಯಲ್ಲಿ ಕಣಿವೆ ಶ್ರೀ ರಾಮಲಿಂಗೇಶ್ವರ ಸ್ವಾಮಿ ದೇವಾಲಯ ಸಮಿತಿಯ ಅಧ್ಯಕ್ಷ ಕೆ. ಎನ್. ಸುರೇಶ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಕಣಿವೆ ಭುವನಗಿರಿ ಹುಲುಸೆ ಹಕ್ಕೆ ವ್ಯಾಪ್ತಿಯ ಗ್ರಾಮಸ್ಥರು ಭಾಗವಹಿಸಿದ್ದರು.