ಮಡಿಕೇರಿ, ಸೆ. ೭: ೧೯೬೫ರ ಇಂಡೋ-ಪಾಕ್ ಯುದ್ಧದಲ್ಲಿ ಹುತಾತ್ಮರಾದ ಸ್ವಾ÷್ಕಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ೫೬ನೇ ಪುಣ್ಯಸ್ಮರಣೆ ಕಾರ್ಯಕ್ರಮ ನಗರದಲ್ಲಿ ನಡೆಯಿತು.

ಕೊಡವ ಮಕ್ಕಡ ಕೂಟ, ಅಜ್ಜಮಾಡ ಕುಟುಂಬ ಹಾಗೂ ಅಜ್ಜಮಾಡ ದೇವಯ್ಯ ಮೆಮೋರಿಯಲ್ ಟ್ರಸ್ಟ್, ಫೀ.ಮಾ. ಕಾರ್ಯಪ್ಪ, ಜನರಲ್ ತಿಮ್ಮಯ್ಯ ಫೋರಂ ವತಿಯಿಂದ ಅಜ್ಜಮಾಡ ದೇವಯ್ಯ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ, ಶ್ರದ್ಧಾಂಜಲಿ ಅರ್ಪಿಸಿ ಹುತಾತ್ಮ ಯೋಧನನ್ನು ಸ್ಮರಿಸಲಾಯಿತು.

ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ವೀರರ ನಾಡು ಎಂದು ಹೆಸರುವಾಸಿಯಾಗಿರುವ ಕೊಡಗು ಜಿಲ್ಲೆಯಲ್ಲಿ ಹುಟ್ಟಿದ ದೇವಯ್ಯ ಅವರು ಜೀವದ ಹಂಗು ತೊರೆದು ಯುದ್ಧದಲ್ಲಿ ಹೋರಾಡಿ ಹುತಾತ್ಮರಾದರು. ಅವರ ಸ್ಮರಣೆ ನಮ್ಮೆಲ್ಲರ ಕರ್ತವ್ಯವಾಗಿದೆ. ದೇಶಸೇವೆ ಮಾಡುವವರಿಗೆ ದೇವಯ್ಯ ಅವರು ದೊಡ್ಡ ಪ್ರೇರಣೆಯಾಗಿದ್ದಾರೆ. ಅವರು ಅಮರಜೀವಿ ಎಂದು ಸ್ಮರಿಸಿದರು. ಯುವಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ಸೈನ್ಯಕ್ಕೆ ಸೇರುವ ಮೂಲಕ ದೇಶವನ್ನು ಕಾಯುವ ಕೆಲಸ ಮಾಡಬೇಕು ಎಂದರು.

ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ, ಯುದ್ಧದ ಸಂದರ್ಭ ಹುತಾತ್ಮರಾದ ದೇವಯ್ಯ ಅವರ ಸೇವೆ ಸ್ಮರಣೀಯ ಎಂದರು.

ಅಜ್ಜಮಾಡ ಕುಟುಂಬ ಹಾಗೂ ಸ್ವಾ÷್ಕ.ಲೀ. ಅಜ್ಜಮಾಡ ದೇವಯ್ಯ ಮೆಮೋರಿಯಲ್ ಟ್ರಸ್ಟ್ನ ಕಾರ್ಯಾಧ್ಯಕ್ಷ ಕಟ್ಟಿ ಮಂದಯ್ಯ ಮಾತನಾಡಿ, ತನ್ನ ೩೨ನೇ ವಯಸ್ಸಿನಲ್ಲಿಯೇ ದೇವಯ್ಯ ಅವರು ದೇಶಕ್ಕೆ ಪ್ರಾಣಾರ್ಪಣೆ ಮಾಡಿದ್ದಾರೆ. ಅವರ ತ್ಯಾಗ, ಬಲಿದಾನ ಅವಿಸ್ಮರಣೀಯ. ಮಹಾವೀರಚಕ್ರ ಪುರಸ್ಕೃತರಾಗಿರುವ ದೇವಯ್ಯ ಅವರ ಹೆಸರು ಚಿರಕಾಲ ಉಳಿಯಬೇಕು ಎಂದರು.

ಫೀ.ಮಾ.ಕಾರ್ಯಪ್ಪ, ಜ. ತಿಮ್ಮಯ್ಯ ಫೋರಂ ಅಧ್ಯಕ್ಷ ಕಂಡ್ರತAಡ ಕರ್ನಲ್ ಸುಬ್ಬಯ್ಯ, ಸಂಚಾಲಕ ನಿವೃತ್ತ ಮೇಜರ್ ಬಿ.ಎ. ನಂಜಪ್ಪ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ, ಅಜ್ಜಮಾಡ ಕುಟುಂಬದ ಅಧ್ಯಕ್ಷ ಲವ ಕುಶಾಲಪ್ಪ, ಕಾರ್ಯದರ್ಶಿ ಎ.ಜಿ. ಬೋಪಯ್ಯ, ಖಜಾಂಚಿ ಚಂಗಪ್ಪ, ಕೊಡಗು ವಿದ್ಯಾಲಯದ ಎನ್.ಸಿ.ಸಿ. ಅಧಿಕಾರಿ ದಾಮೋದರ್, ನಗರಸಭೆ ಪೌರಾಯುಕ್ತ ರಾಮದಾಸ್, ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.