ನಾಪೋಕ್ಲು, ಸೆ. ೮: ಕೊಡಗು ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸಲು ಜಿಲ್ಲೆಯಲ್ಲಿ ಶೇ. ೮೨ ರಷ್ಟು ಲಸಿಕೆ ನೀಡಲಾಗಿದ್ದು, ಮುಂದೆ ಶೇ. ೧೦೦ರ ಗುರಿ ಸಾಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಹೇಳಿದರು.

ಅವರು ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೆÉÃಟಿ ನೀಡಿ ಕೋವಿಡ್ ನಿಯಂತ್ರಣದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು. ಜಿಲ್ಲೆಯಲ್ಲಿ ಈಗ ಶೇ. ೨ಕ್ಕಿಂತ ಜಾಸ್ತಿ ಪಾಸಿಟಿವಿಟಿ ಇರುವುದರಿಂದ ಅಧಿಕಾರಿಗಳು ಹೆಚ್ಚಿನ ಶ್ರಮಪಡುತ್ತಿದ್ದಾರೆ. ಇದರಿಂದ ಪಾಸಿಟಿವಿಟಿ ಕಡಿಮೆಯಾಗಿದೆ. ಜಿಲ್ಲೆಯಲ್ಲಿ ನಿಫಾ ಬಗ್ಗೆ ಯಾವುದೇ ಲಕ್ಷಣ ಕಂಡು ಬಂದಿಲ್ಲ; ಆದರೂ ರಾಜ್ಯ ಸರಕಾರದ ಆದೇಶದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲೆಯ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದರು. ಯಾರು ಕೂಡ ಅನಾವಶ್ಯಕವಾಗಿ ಕೇರಳಕ್ಕೆ ಹೋಗಿ ಬರುವುದು ಮಾಡಬಾರದು. ಅಂತಹವರ ಮೇಲೆ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿಗಳ ಹಾಗೂ ವೈದ್ಯರ ಕೊರತೆ ಬಗ್ಗೆ ಗಮನ ಸೆಳೆದಾಗ ಜಿಲ್ಲೆಯ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದರು. ಯಾರು ಕೂಡ ಅನಾವಶ್ಯಕವಾಗಿ ಕೇರಳಕ್ಕೆ ಹೋಗಿ ಬರುವುದು ಮಾಡಬಾರದು. ಅಂತಹವರ ಮೇಲೆ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿಗಳ ಹಾಗೂ ವೈದ್ಯರ ಕೊರತೆ ಬಗ್ಗೆ ಗಮನ ಸೆಳೆದಾಗ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಇದೇ ಸಂದರ್ಭ ನಾಡ ಕಚೇರಿಗೆ ಭೇಟಿ ನೀಡಿದ ಅವರು; ಕಂದಾಯ ಇಲಾಖೆಯ ಕಾರ್ಯವೈಖರಿಯನ್ನು ಪರಿಶೀಲಿಸಿದರು. ನಂತರ ಸ್ಥಳೀಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕರಿಗೆ ಲಸಿಕೆ ನೀಡುತ್ತಿರುವ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿಯನ್ನು ಪಡೆದರು.

ಮಡಿಕೇರಿ ತಾಲೂಕು ತಹಶೀಲ್ದಾರ್ ಮಹೇಶ್, ಮಡಿಕೇರಿ ತಾಲೂಕು ವೈದ್ಯಾಧಿಕಾರಿ ಡಾ. ಚೇತನ್, ನಾಪೋಕ್ಲು ಕಂದಾಯ ಪರೀವಿಕ್ಷಕ ರವಿ ಕುಮಾರ್, ಡಾ. ಚಂಗುಲAಡ ಪೂವಯ್ಯ, ಡಾ. ಆಕಾಶ್, ಗ್ರಾಮ ಲೆಕ್ಕಿಗೆ ಅಮೃತ, ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತಿತರರು ಇದ್ದರು.