ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ

ÀÄಡಿಕೇರಿ, ಸೆ. ೯: ಮುಂಬರಲಿರುವ ಐತಿಹಾಸಿಕ ನಾಡಹಬ್ಬ ಮಡಿಕೇರಿ ದಸರಾ ಹಾಗೂ ಕಾವೇರಿ ತೀರ್ಥೋದ್ಭವವನ್ನು ಕೋವಿಡ್ ಮಾರ್ಗಸೂಚಿಯಡಿ ಆಚರಣೆ ಮಾಡಲಾಗುವುದು ಎಂದು ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಮಾರ್ಗಸೂಚಿಯಡಿ ದಸರಾ ಆಚರಣೆ ನಡೆಯಲಿದ್ದು, ಅನುದಾನದ ಅಗತ್ಯವಿದ್ದರೆ ಸರ್ಕಾರ ಒದಗಿಸಲಿದೆ ಎಂದು ಹೇಳಿದರು. ಪವಿತ್ರ ಕ್ಷೇತ್ರಗಳಾದ ತಲಕಾವೇರಿ - ಭಾಗಮಂಡಲದಲ್ಲಿ ಕೆಲ ತಿಂಗಳುಗಳಿAದ ಸಿಬ್ಬಂದಿಗಳಿಗೆ ವೇತನ ದೊರಕದ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಸಚಿವರು ಈಗ ತಾನೆ ಅಲ್ಲಿನ ಸಿಬ್ಬಂದಿಗಳಿಗೆ ವೇತನ ಸಿಗದಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು. ಪ್ರಥಮ ಹಂತದ ಕೋವಿಡ್ ಲಸಿಕೆ ವಿತರಣೆ ಈಗಾಗಲೇ ಜಿಲ್ಲೆಯಲ್ಲಿ ಶೇ. ೮೩ ರಷ್ಟು ಗುರಿಮುಟ್ಟಿದ್ದು, ತಾ. ೨೫ರ ಒಳಗಾಗಿ ಶೇ. ೧೦೦ ಸಾಧನೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಈ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಅಧಿಕಾರಿ ವರ್ಗದಿಂದ ಮೊದಲ್ಗೊಂಡು ಜಿಲ್ಲಾಮಟ್ಟದ ಅಧಿಕಾರಿಗಳು ಕೂಡ ಪ್ರತಿಯೊಬ್ಬರು ಲಸಿಕೆ ಪಡೆಯುವಂತಾಗಲು ಶ್ರಮಿಸಬೇಕೆಂದು ನಿರ್ದೇಶನ ನೀಡಿರುವದಾಗಿ ಸಚಿವರು ತಿಳಿಸಿದರು. ಜಿಲ್ಲೆಯ ಗಡಿ ಚೆಕ್‌ಪೋಸ್ಟ್ಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಂಬAಧ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವುದಾಗಿಯೂ ಶ್ರೀನಿವಾಸ ಪೂಜಾರಿ ಮಾಹಿತಿಯಿತ್ತರು.