ನಾಪೋಕ್ಲು, ಸೆ. ೯: ನಾಪೋಕ್ಲು ನಾಡು ಗೌರಿಗಣೇಶೋತ್ಸವ ಸಮಿತಿ ವತಿಯಿಂದ ಗೌರಿಗಣೇಶೋತ್ಸವವನ್ನು ಶುಕ್ರವಾರ ಇಲ್ಲಿನ ಭಗವತಿ ದೇವಾಲಯದ ಆವರಣದ ಸಮುದಾಯ ಭವನದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಸರಳವಾಗಿ ಆಚರಿಸಲಾಗುವುದು. ಬೆಳಿಗ್ಗೆ ೧೦.೩೦ ಗಂಟೆಗೆ ಗಣಹೋಮ, ಮೂರ್ತಿ ಪ್ರತಿಷ್ಠಾಪನೆ, ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ನೆರವೇರಲಿದೆ. ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಲಿದ್ದು, ಅಪರಾಹ್ನ ೩ಗಂಟೆಗೆ ಪೂಜೆಯ ನಂತರ ಕೆರೆಯಲ್ಲಿ ಗಣೇಶ ಮೂರ್ತಿಯ ವಿಸರ್ಜನೆ ಮಾಡಲಾಗುವುದು ಎಂದು ದೇವಾಲಯದ ಅಧ್ಯಕ್ಷರು ಹಾಗೂ ಸಮಿತಿ ಸದಸ್ಯರು ತಿಳಿಸಿದ್ದಾರೆ.