ಗೋಣಿಕೊಪ್ಪ ವರದಿ, ಸೆ. ೯ ; ಅಮ್ಮತ್ತಿ ಬಸವೇಶ್ವರ ದೇವಸ್ಥಾನ ಟ್ರಸ್ಟ್ ವತಿಯಿಂದ ಗೌರಿ ಗಣೇಶ ಹಬ್ಬದ ತುರ್ತು ಪೂರ್ವಭಾವಿ ಸಭೆ ನಡೆಯಿತು.
ಶುಕ್ರವಾರ ಬೆಳಿಗ್ಗೆ ೬.೦೦ ಗಂಟೆಗೆ ದೇವಸ್ಥಾನದಲ್ಲಿ ಗಣಪತಿ ಹೋಮ, ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ನಿರ್ಧರಿಸಲಾಯಿತು.
ಶನಿವಾರ ಮತ್ತು ಭಾನುವಾರ ಬೆಳಗ್ಗೆ ೭ ಗಂಟೆಯಿAದ ಸಂಜೆ ೮ ಗಂಟೆಯವರೆಗೆ ನಿತ್ಯ ಪೂಜೆ, ರಾತ್ರಿ ೮ ಗಂಟೆಗೆ ಮಹಾ ಪೂಜೆ, ಸೋಮವಾರ ಸಂಜೆ ೪ ಗಂಟೆಗೆ ಸರ್ಕಾರದ ಮಾರ್ಗಸೂಚಿಯಂತೆ ಸರಳ ರೀತಿಯಲ್ಲಿ ಮೂರ್ತಿಯ ವಿಸರ್ಜನೆ ಮಾಡಲು ತೀರ್ಮಾನಿಸಲಾಯಿತು. ಅಧ್ಯಕ್ಷ ಮಾಚಿಮಂಡ ಮಧು ಮಾದಪ್ಪ, ಉಪಾಧ್ಯಕ್ಷ ಕುಟ್ಟಂಡ ಪ್ರಿನ್ಸ್ ಗಣಪತಿ, ಜಂಟಿ ಕಾರ್ಯದರ್ಶಿ ಮುಕ್ಕಾಟೀರ ಬೋಪಣ್ಣ ಇದ್ದರು.