ಮಡಿಕೇರಿ, ಸೆ. ೯: ಇಲ್ಲಿನ ಕೆಎಸ್‌ಆರ್‌ಟಿಸಿ ಡಿಪೋ ಬಳಿಯ ಶಾಂತಿನಿಕೇತನ ಬಡಾವಣೆಯಲ್ಲಿ ಶಾಂತಿನಿಕೇತನ ಯುವಕ ಸಂಘದ ವತಿಯಿಂದ ಗಣೇಶೋತ್ಸವ ಪ್ರಯುಕ್ತ ತಾ. ೧೦ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ಶ್ರೀ ಗಣಪತಿ ಹೋಮದೊಂದಿಗೆ ಶ್ರೀ ಮಹಾಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ೫ ದಿನಗಳ ಕಾಲ ಬೆಳಿಗ್ಗೆ ಮತ್ತು ಸಂಜೆ ವಿಶೇಷ ಪೂಜೆ ನಡೆಯಲಿದೆ. ತಾ. ೧೩ ರಂದು ಸಂಜೆ ೭ ಗಂಟೆಗೆ ರಂಗಪೂಜೆ ನಡೆಯಲಿದೆ. ತಾ. ೧೪ ರಂದು ಸಂಜೆ ೫ ಗಂಟೆಗೆ ಮಹಾಪೂಜೆಯ ನಂತರ ಶ್ರೀ ಮಹಾಗಣಪತಿ ಮೂರ್ತಿಯನ್ನು ಗೌರಿಕೆರೆಯಲ್ಲಿ ವಿಸರ್ಜಿಸಲಾಗುವುದು ಎಂದು ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿಯವರು ತಿಳಿಸಿದ್ದಾರೆ.