*ವೀರಾಜಪೇಟೆ, ಸೆ. ೯: ಕೋವಿಡ್ ಸಮಯದಲ್ಲಿ ಯಾರು ಉಪವಾಸದಿಂದ ಬಳಲಬಾರದು ಎಂಬ ಸರ್ಕಾರದ ಮೂಲ ಉದ್ದೇಶದಿಂದ ನಿರುದ್ಯೋಗಿಗಳಿಗೆ ಆಹಾರದ ಕಿಟ್ಗಳನ್ನು ವಿತರಿಸಲಾಗುತ್ತಿದೆ ಎಂದು ವೀರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಹೇಳಿದರು.
ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಆಡಳಿತ, ವೀರಾಜಪೇಟೆ ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ಕಾರ್ಮಿಕ ಇಲಾಖೆಯಿಂದ ನೋಂದಾಯಿತ ೧೧ ವಲಯದ ಅಸಂಘಟಿತ ಕಾರ್ಮಿಕರಿಗೆ ಆಹಾರ ಹಾಗೂ ವೈದ್ಯಕೀಯ ಕಿಟ್ ವಿತರಿಸಿ ಮಾತನಾಡಿ, ಸರ್ಕಾರ ಕೋವಿಡ್ ೧೯ ನ್ನು ಗಂಭೀರವಾಗಿ ಪರಿಗಣಿಸಿದೆ. ಅಸಂಘಟಿತ ಕಾರ್ಮಿಕರು ಸೇರಿದಂತೆ ಉಳಿದ ಯಾವುದೇ ಕಾರ್ಮಿಕರಿಗೆ ಕೆಲಸ ಇಲ್ಲದಂತಾಗಿದೆ. ಯಾರು ಹಸಿವಿನಿಂದ ಇರಬಾರದು ಎಂಬ ಉದ್ದೇಶ ಸರ್ಕಾರದ್ದಾಗಿದೆ. ಮಹಾಮಾರಿ ಕೊರೊನಾ ದೂರ ಆಗುವವರೆಗೆ ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ. ನಾವು ೨ ಲಸಿಕೆ ಪಡೆದುಕೊಂಡಿದ್ದೇವೆ ಎಂದು ನಿರ್ಲಕ್ಷö್ಯ ವಹಿಸುವುದು ಸರಿಯಲ್ಲ. ಮುಂಜಾಗೃತಾ ಕ್ರಮವಾಗಿ ಎಲ್ಲಾ ಮಾರ್ಗಸೂಚಿಯನ್ನು ಪಾಲಿಸಬೇಕು ಎಂದರು.
ಪಕ್ಕದ ಕೇರಳ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇದಿನೇ ಹೆಚ್ಚಾಗುತ್ತಿರುವ ಹಿನೆÀ್ನಲೆಯಲ್ಲಿ ಯಾರು ಕೇರಳ ರಾಜ್ಯಕ್ಕೆ ತೆರಳಬೇಡಿ. ತೀರಾ ಅನಿವಾರ್ಯ ಪರಿಸ್ಥಿತಿ ಇದ್ದರೆ ಎಲ್ಲಾ ಮುಂಜಾಗ್ರತಾ ಕ್ರಮವನ್ನು ಅನುಸರಿಸಿ. ಲಸಿಕೆ ವಿಚಾರದಲ್ಲಿ ಎದ್ದಿರುವ ಗೊಂದಲಗಳು ಎಲ್ಲಾ ನಿವಾರಣೆಯಾಗಿದೆ. ಅಪಪ್ರಚಾರಕ್ಕೆ ಒಳಗಾಗದೆ ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಳ್ಳಿ. ಲಸಿಕೆ ಹಾಕಿಸಿಕೊಂಡರು ಸೋಂಕು ತಟ್ಟುವುದಿಲ್ಲ ಎಂದು ಹೇಳಲಾಗದು. ಆದರೆ ಸೋಂಕಿನ ಗಂಭೀರತೆ ಕಡಿಮೆ ಇರುತ್ತದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ೪೦ ರಿಂದ ೬೦ ವಯೋಮಿತಿಯ ಅಸಂಘಟಿತ ಕಾರ್ಮಿಕರಿಗೆ ವೈದ್ಯಕೀಯ ಕಿಟ್ ವಿತರಿಸಲಾಯಿತು.
ವೇದಿಕೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸುಶ್ಮಿತಾ, ಸ್ಥಾಯಿ ಸಮಿತಿ ಅಧ್ಯಕ್ಷೆ ಸುನೀತಾ, ಸದಸ್ಯರಾದ ಮಂಡೇಪAಡ ವಿನಾಂಕ್ ಕುಟ್ಟಪ್ಪ, ಪೂರ್ಣಿಮಾ, ಕೂತಂಡ ಸಚಿನ್, ಬಿ.ಡಿ ಸುನಿತಾ, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಚಂದ್ರಕುÀಮಾರ್ ಮತ್ತಿತರರು ಉಪಸ್ಥಿತರಿದ್ದರು.