ಸುಂಟಿಕೊಪ್ಪ, ಸೆ. ೯ : ಸುಂಟಿಕೊಪ್ಪ ವಿಶ್ವ ಹಿಂದೂ ಪರಿಷತ್ ಹಾಗೂ ಶ್ರೀ ಗೌರಿಗಣೇಶೋತ್ಸವ ಆಚರಣಾ ಸಮಿತಿ ವತಿಯಿಂದ ಗೌರಿ ಗಣೇಶೋತ್ಸವವನ್ನು ಸರಕಾರದ ಮಾರ್ಗಸೂಚಿ ಅನುಸಾರ ಇದೀಗ ೩ ದಿವಸ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಬಿ.ಎಂ. ಸುರೇಶ್ ಕಾರ್ಯದರ್ಶಿ ಸುರೇಶ್ ಗೋಪಿ ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.

ತಾ. ೯ ರಂದು ಪಟ್ಟೆಮನೆ ಗೌರಮ್ಮನ ಬಾವಿಯಿಂದ ಗಂಗಾಜಲದೊAದಿಗೆ ಗೌರಮ್ಮನ ಉತ್ಸವ ಮೂರ್ತಿಯನ್ನು ತಂದು ಬೆಳಿಗ್ಗೆ ೧೦.೩೦ ಗಂಟೆಗೆ ಶ್ರೀ ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲಾಗುವುದು.

ತಾ. ೧೦ ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ಗಣಪತಿಯ ಪ್ರತಿಷ್ಠಾಪನೆ ಮಾಡಲಾಗುವುದು. ತಾ. ೧೨ ರಂದು ಮಧ್ಯಾಹ್ನ ೧೨ ಗಂಟೆಗೆ ಪೂಜೆ ನೆರವೇರಿದ ಬಳಿಕ ಗದ್ದೆಹಳ್ಳದಲ್ಲಿರುವ ಯಂಕನ ಉಲ್ಲಾಸ್ ಮತ್ತು ವೈ.ಎಂ. ಕರುಂಬಯ್ಯ ಅವರ ಕೆರೆಯಲ್ಲಿ ಉತ್ಸವ ಮೂರ್ತಿಗಳನ್ನು ವಿಸರ್ಜಿಸಲಾಗುವುದು ಎಂದು ತಿಳಿಸಿದ್ದಾರೆ.