ಕೂಡಿಗೆ, ಸೆ. ೧೧: ಹೆಬ್ಬಾಲೆ ಗ್ರಾಮ ಪಂಚಾಯಿತಿ ಸಮೀಪದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕವು ಕಳೆದ ಎರಡು ವರ್ಷಗಳಿಂದ ನಿರುಪಯುಕ್ತವಾಗಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಯೋಜನೆಗಳ ಅಡಿಯಲ್ಲಿ ಜಿಲ್ಲೆಯ ಅನೇಕ ಭಾಗಗಳಲ್ಲಿ ಇಂತಹ ಘಟಕಗಳನ್ನು ತೆರೆಯಲಾಗಿದೆ ಒಂದು ರೂಪಾಯಿಗೆ ಕುಡಿಯುವ ನೀರನ್ನು ಪಡೆಯುವ ಯೋಜನೆ ನಿರುಪಯುಕ್ತವಾಗಿದ್ದು, ಸಂಬAಧಿಸಿದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ತುರ್ತು ಕ್ರಮವನ್ನು ಕೈಗೊಳ್ಳಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ.