ಮಡಿಕೇರಿ, ಸೆ. ೧೧: ಕೊಡಗು ಅರಣ್ಯ ವೃತ್ತದಲ್ಲಿ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ತಮ್ಮ ಪ್ರಾಣ ಅರ್ಪಿಸಿದ ಅರಣ್ಯ ಅಧಿಕಾರಿಗಳ ಹುತಾತ್ಮರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕೊಡಗು ಅರಣ್ಯ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ತಾಕತ್ ಸಿಂಗ್ ರಾಣಾವತ್ ಹಾಗೂ ಮಡಿಕೇರಿ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ. ಪೂವಯ್ಯ, ಕೊಡಗು ವೃತ್ತದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ವಲಯ ಅರಣ್ಯಾಧಿಕಾರಿಗಳು, ಉಪ ವಲಯ ಅರಣ್ಯ ಅಧಿಕಾರಿಗಳು, ಅರಣ್ಯ ರಕ್ಷಕರು, ಅರಣ್ಯ ವೀಕ್ಷಕರು ಮತ್ತು ಕಚೇರಿ ಸಿಬ್ಬಂದಿಗಳು ಹೂವು ಗುಚ್ಚ ಸಮರ್ಪಿಸಿ ಗೌರವ ಸಲ್ಲಿಸಿದರು.