ಸೋಮವಾರಪೇಟೆ, ಸೆ. ೧೧: ವಿವಿಧ ಇಲಾಖೆಗಳ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡುವ ತಾಲೂಕು ಸಲಹಾ ಸಮಿತಿ ಸಭೆ ಇಲ್ಲಿನ ಕೃಷಿ ಇಲಾಖೆಯ ಸಭಾಂಗಣದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ಕೆ.ಕವಿತ ವಹಿಸಿದ್ದರು. ನಂತರ ಅವರು ಮಾತನಾಡಿ, ಬೆಳೆ ಸರ್ವೆ, ಬಾಡಿಗೆ ಆಧಾರಿತ ಕೃಷಿ ಯಂತ್ರಧಾರಾ ಯೋಜನೆ ಬಗ್ಗೆ ಮಾಹಿತಿ ನೀಡಿದರು. ನರೇಗಾ ಯೋಜನೆಯಲ್ಲಿ ಇಂಗು ಗುಂಡಿ, ಕೃಷಿ ಹೊಂಡ ನಿರ್ಮಿಸಲು ಅವಕಾಶವಿದ್ದು, ರೈತರು ಸೌಲಭ್ಯವನ್ನು ಪಡೆದುಕೊಳ್ಳಬಹುದೆಂದು ತಿಳಿಸಿದರು. ಕೃಷಿ ಯಂತ್ರೋಪಕರಣಗಳನ್ನು ಸಹಾಯಧನದಲ್ಲಿ ರೈತರು ಪಡೆದುಕೊಳ್ಳಬಹುದು. ಕೃಷಿ ಸಂಪರ್ಕ ಕೇಂದ್ರಗಳಲ್ಲಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಎಂದರು.

ಸಭೆಯಲ್ಲಿ ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ವಿ.ಬದಾಮಿ, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಶೆಟ್ಟಿ, ಕೃಷಿ ಅಧಿಕಾರಿ ನವ್ಯ ನಾಣಯ್ಯ, ಸಮಿತಿ ಸದಸ್ಯರಾದ ಕ್ಯಾತೆ ಶಿವು, ಸತೀಶ್, ಶಿವಲಿಂಗಯ್ಯ, ರಜಿತ್, ವಸಂತ, ಧನಂಜಯ, ಕಮಲಮ್ಮ, ವಿಕ್ರಮ್, ಪ್ರದೀಪ್, ಪ್ರಸನ್ನ ಇದ್ದರು.