ನಾಪೋಕ್ಲು, ಸೆ. ೧೨: ರಾಷ್ಟಿçÃಯ ಶಿಕ್ಷಣ ನೀತಿ ೨೦೨೦ ರ ಅನುಷ್ಠಾನದಿಂದ ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗಳು ಆಗಲಿವೆ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಬಿದ್ದಾಟಂಡ ರಮೇಶ್ ಚೆಂಗಪ್ಪ ಹೇಳಿದರು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸ ಲಾಗಿದ್ದ ರಾಷ್ಟಿçÃಯ ಶಿಕ್ಷಣ ನೀತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತ ನಾಡಿದ ಕಾಲೇಜು ಪ್ರಾಂಶುಪಾಲೆ ಡಾ. ಕಾವೇರಿ ಪ್ರಕಾಶ್ ದೇಶದಲ್ಲಿ ಶಿಕ್ಷಣಕ್ಕೆ ಹೆಚ್ಚು ಮಹತ್ವವನ್ನು ನೀಡಲಾಗುತ್ತಿದ್ದು, ಪ್ರತಿಯೊಬ್ಬರು ಈ ನೀತಿಯನ್ನು ಅರಿತುಕೊಳ್ಳಬೇಕೆಂದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ವಾಣಿಜ್ಯ ಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕ ಮುದ್ದಪ್ಪ, ರಾಷ್ಟಿçÃಯ ಶಿಕ್ಷಣ ನೀತಿಯ ಬಗ್ಗೆ ವಿವರವಾದ ಮಾಹಿತಿ ನೀಡಿದರು. ವೇದಿಕೆಯಲ್ಲಿ ವಾಣಿಜ್ಯಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕ ಮನೋಜ್‌ಕುಮಾರ್, ಪ್ರಾಧ್ಯಾಪಕರಾದ ಲೀಲಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪೋಷಕರು ಪಾಲ್ಗೊಂಡಿದ್ದರು. -ದುಗ್ಗಳ.