ನಾಪೋಕ್ಲು, ಸೆ. ೧೧: ನಿಗದಿತ ಕಾರ್ಮಿಕರಿಗಿಂತ ಹೆಚ್ಚಿನವರನ್ನು ವಾಹನಗಳಲ್ಲಿ ತುಂಬಿಸಿಕೊAಡು ಸಂಚರಿಸಿದರೆ ಅಂತಹ ವಾಹನಗಳ ಮೇಲೆ ಕೇಸ್ ದಾಖಲಿಸಿ ಕ್ರಮಕೈಗೊಳ್ಳಲಾಗುವುದು ಎಂದು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಟಾಸ್ಕ್ ಪೋರ್ಸ್ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಕೊಳಕೇರಿ ವ್ಯಾಪ್ತಿಯಲ್ಲಿ ಕೋವಿಡ್ ಬಗ್ಗೆ ಅರಿವು ಮೂಡಿಸಿ ಪೂರ್ಣ ಪ್ರಮಾಣದಲ್ಲಿ ಲಸಿಕೆಯನ್ನು ನೀಡುವಂತೆ ತೀರ್ಮಾನಿಸಲಾಯಿತು. ಅಲ್ಲದೆ ಪಾಸಿಟಿವ್ ಬಂದAತಹ ವ್ಯಕ್ತಿಯನ್ನು ಕಡ್ಡಾಯವಾಗಿ ಕೋವಿಡ್ ಸೆಂಟರ್‌ಗೆ ಕಳುಹಿಸುವಂತೆ ಸಭೆಯಲ್ಲಿ ತಿಳಿಸಲಾಯಿತು. ನಾಪೋಕ್ಲು ವಿಭಾಗದಲ್ಲಿ ಕೋವಿಡ್ ಪ್ರಕರಣ ಜಾಸ್ತಿಯಾಗಿದ್ದು ಇದನ್ನು ನಿಯಂತ್ರಿಸಲು ಪ್ರತಿಯೊಬ್ಬರು ಮಾಸ್ಕ್ ಧರಿಸಿ ಅಂತರವನ್ನು ಕಾಯ್ದುಕೊಳ್ಳುವಂತೆ ಹಾಗೂ ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್ ಮುಕ್ತವಾಗಿಸಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕೆಂದು ಸಭೆಯಲ್ಲಿ ತಿಳಿಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಎಚ್.ಎಸ್. ಪಾರ್ವತಿ, ನೋಡಲ್ ಅಧಿಕಾರಿ ರಾಜಶೇಖರ್, ಟಾಸ್ಕ್ ಪೋರ್ಸ್ ಸಮಿತಿಯ ಸದಸ್ಯರಾದ ಪೊಲೀಸ್, ಕಂದಾಯ, ಆರೋಗ್ಯ ಇಲಾಖೆ ಸಿಬ್ಬಂದಿಯವರು, ಗ್ರಾಮ ಪಂಚಾಯಿತಿ ಪಿ.ಡಿ.ಓ. ಚೋಂದಕ್ಕಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.