ನಾಪೋಕ್ಲು, ಸೆ. ೧೧: ಮಹಿಳೆಯರು ಪುರುಷರಷ್ಟೆ ಸಮಾನರು. ಯಾವುದೇ ಮಹಿಳೆ ತನಗೆ ತೊಂದರೆಯಾದರೆ ಕಾನೂನಿನ ಮೊರೆ ಹೋಗಬಹುದು ಎಂದು ಠಾಣಾಧಿಕಾರಿ ಆರ್. ಕಿರಣ್ ತಿಳಿಸಿದರು. ನಾಪೋಕ್ಲು ಹಳೆೆÃ ತಾಲೂಕಿನ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪೋಷಣ ಮತ್ತು ಮಾತೃವಂದನ ಯೋಜನೆ ಮತ್ತು ಕೋವಿಡ್ ಲಸಿಕೆ ಬಗ್ಗೆ ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರು ಉತ್ತಮ ಆರೋಗ್ಯವನ್ನು ಹೊಂದಲು ಸ್ಥಳೀಯ ಸೊಪ್ಪು ತರಕಾರಿಗಳನ್ನು ಉಪಯೋಗಿಸಬೇಕು ಹಾಗೂ ಕೋವಿಡ್ ನಿಯಂತ್ರಣದ ಬಗ್ಗೆ ಇತರರಿಗೂ ಅರಿವನ್ನು ಮೂಡಿಸಬೇಕೆಂದರು. ಗ್ರಾಮ ಪಂಚಾಯಿತಿ ಸದಸ್ಯ ಕುಲ್ಲೇಟಿರ ಅರುಣ ಬೇಬ ಮಾತನಾಡಿ, ಕೋವಿಡ್ ನಿಯಂತ್ರಣಕ್ಕೆ ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕೆಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಗವತಿ ಮಹಿಳಾ ಸಮಾಜದ ಅಧ್ಯಕ್ಷೆ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ವಹಿಸಿ ಮಾತನಾಡಿದರು. ಯಶೋಧ ಪ್ರಾರ್ಥಿಸಿ, ಅಂಗನವಾಡಿ ಕಾರ್ಯಕರ್ತೆ ಭಾಗ್ಯವತಿ ಸ್ವಾಗತಿಸಿ, ನಿರೂಪಿಸಿದರು. ಪವಿತ್ರ ವಂದಿಸಿದರು.