ಶನಿವಾರಸಂತೆ, ಸೆ. ೧೨: ಪಟ್ಟಣದ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ಗೌರಿ - ಗಣೇಶ ಹಬ್ಬದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪರಿಸರ ಸ್ನೇಹಿ ಅರಿಶಿಣದ ಗೌರಿ - ಗಣಪತಿಯನ್ನು ತಯಾರಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ೫ ರಿಂದ ೧೦ನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿ ವೈವಿಧ್ಯಮಯ ಗೌರಿ-ಗಣಪತಿ ಮೂರ್ತಿಗಳನ್ನು ತಯಾರಿಸಿ ಬಹುಮಾನಗಳನ್ನು ಗಳಿಸಿದರು. ಪ್ರಾಂಶುಪಾಲೆ ಸುಜಲಾದೇವಿ ಮಾತನಾಡಿ, ವಾತಾವರಣದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಅರಿಶಿಣ ಮಹತ್ವದ ಪಾತ್ರ ವಹಿಸುತ್ತದೆ. ಹಾಗಾಗಿ ವಿದ್ಯಾರ್ಥಿಗಳಿಗೆ ಅರಿಶಿಣದಿಂದ ಮೂರ್ತಿಗಳನ್ನು ತಯಾರಿಸಲು ಮಾರ್ಗದರ್ಶನ ನೀಡಲಾಗಿತ್ತು ಎಂದರು.

ವಿದ್ಯಾಸAಸ್ಥೆ ಕಾರ್ಯದರ್ಶಿ ಗುರುಪ್ರಸಾದ್ ಹಾಗೂ ಶಿಕ್ಷಕರು ಹಾಜರಿದ್ದರು.